Slide
Slide
Slide
previous arrow
next arrow

ಯಲ್ಲಾಪುರ ತಹಶೀಲ್ದಾರ ವರ್ಗಾವಣೆ

300x250 AD

ಯಲ್ಲಾಪುರ: ಕಳೆದ ಎರಡು ವರ್ಷದಿಂದ ಯಲ್ಲಾಪುರ ಗ್ರೇಡ್ 1 ತಹಶೀಲ್ದಾರ್‌ರಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀಕೃಷ್ಣ ಕಾಮಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನದಲ್ಲಿ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಗ್ರೇಡ್ 1 ತಹಶೀಲ್ದಾರ ಶಂಕರಪ್ಪ ಜಿ ಎಸ್ ಅವರನ್ನು ನೇಮಿಸಿ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಜಿ.ಎನ್.ಸುಶೀಲ ತಿಳಿಸಿದ್ದಾರೆ.
ರಾಜ್ಯಾದ್ಯಂತ ಒಟ್ಟು 76 ತಹಶೀಲ್ದಾರರನ್ನು ಕರ್ನಾಟಕ ವಿಧಾನಸಭಾ ಚುನಾವಣೆ -2023ರ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ಕಂದಾಯ ಇಲಾಖೆಯ ತಹಶೀಲ್ದಾರ್‌ಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಮೂದಿಸಿರುವ ಸ್ಥಳಕ್ಕೆ ವರ್ಗಾಯಿಸಿ ಆದೇಶಿಸಿಸಲಾಗಿದೆ.
ವರ್ಗಾವಣೆಗೊಂಡ ಅಧಿಕಾರಿಗಳು ವರ್ಗಾಯಿಸಿ ನೇಮಿಸಲಾದ ಹುದ್ದೆಯ ಕರ್ತವ್ಯಕ್ಕೆ ವರದಿ ಮಾಡಿಕೊಂಡು ಸಿಟಿಸಿ ಪ್ರತಿಯನ್ನು ಇ-ಮೇಲ್ ಮೂಲಕ ಕಂದಾಯ ಇಲಾಖೆಗೆ ಕಳುಹಿಸುವಂತೆ ಹಾಗೂ ವರ್ಗಾವಣೆಯಿಂದ ಸ್ಥಳ ನಿರೀಕ್ಷಣೆಗಾಗಿ ಬರಲಿರುವ ಅಧಿಕಾರಿಗಳು ಮುಂದಿನ ಸ್ಥಳನಿಯುಕ್ತಿಗಾಗಿ ಕಂದಾಯ ಇಲಾಖೆಯಲ್ಲಿ ಕಾರ್ಯವರದಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

300x250 AD
Share This
300x250 AD
300x250 AD
300x250 AD
Back to top