ನವದೆಹಲಿ: ಲೋಕಸಭೆಯಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ 2023-24 ನೇ ಸಾಲಿನ ಬಜೆಟ್ ಮಂಡನೆ ಭಾಷಣವನ್ನು ಆರಂಭಿಸಿದ್ದು, ಸಿರಿಧಾನ್ಯ ಸಂಶೋಧನೆಗೆ ಸರ್ಕಾರದ ಬೆಂಬಲವಿದೆ ಎಂದು ಹೇಳಿದ್ದಾರೆ.
ರಾಗಿ ಸೇರಿದಂತೆ ಸಿರಿಧಾನ್ಯಗಳ ಬೆಳೆ ಪದ್ಧತಿ ಸುಧಾರಣೆಗಾಗಿ ಸಂಶೋಧನೆ ನಡೆಸಲು ಹಾಗೂ ಉತ್ತಮ ಬೆಳೆ ಪದ್ಧತಿಯ ದಾಖಲಾತಿಗಾಗಿ ‘ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮಿಲೆಟ್ ರೀಸರ್ಚ್’ ಸಂಸ್ಥೆಗೆ ಅಗತ್ಯ ನೆರವು ಒದಗಿಸಲಾಗುವುದು. ಈ ಸಂಸ್ಥೆಗೆ ‘ಸೆಂಟರ್ ಆಫ್ ಎಕ್ಸೆಲೆನ್ಸ್’ ಉಪಕ್ರಮದ ಮೂಲಕ ಬೆಂಬಲಿಸಲಾಗುವುದು ಎಂದು ಸಚಿವರು ಘೋಷಿಸಿದರು.