ಹೊನ್ನಾವರ: ತಾಲೂಕಿನ ಕರ್ಕಿನಾಕಾ ಸಮೀಪ ಬುಧವಾರ ಮಂಜಾನೆ 2 ಗಂಟೆಯ ಸಮೀಪದಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಕುಮಟಾ ಮಾರ್ಗದಿಂದ ಹೊನ್ನಾವರ ಕಡೆ ರಾಷ್ಟೀಯ ಹೆದ್ದಾರಿ ಮೂಲಕ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಬಸ್ ಚಲಾಯಿಸಿಕೊಂಡ ಬಂದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೊಗುತ್ತಿದ್ದ ವ್ಯಕ್ತಿಗೆ ಡಿಕ್ಕಿಯಾಗಿದೆ. ಗಾಯಾಳು ಹೊನ್ನಾವರ ಪಟ್ಟಣ ಪಂಚಾಯತಿ ಸದಸ್ಯ ಸುಬ್ರಾಯ ಗೌಡ ಎಂದು ತಿಳಿದು ಬಂದಿದ್ದು ಕೈ ಹಾಗೂ ಕಾಲಿನ ಭಾಗಕ್ಕೆ ಗಂಭೀರ ಗಾಯವಾಗಿದೆ. ಗಾಯಾಳುವನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದು ಈ ಸಂಭದ ಹೊನ್ನಾವರ ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.