• Slide
    Slide
    Slide
    previous arrow
    next arrow
  • ಅಂಗನವಾಡಿ ನೌಕರರ ಬೇಡಿಕೆ ಈಡೇರಿಕೆಗೆ ಸ್ಪಂದನೆ; ಹೋರಾಟ ಹಿಂಪಡೆಯಲು ನಿರ್ಧಾರ

    300x250 AD

    ಕಾರವಾರ: ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ, ಸಿಐಟಿಯು ಸಂಘಟನೆಯ ನೇತೃತ್ವದಲ್ಲಿ ಜ.23ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಮುಷ್ಕರ ನಾಡಿನ ಎಲ್ಲರ ಗಮನ ಸೆಳೆದು ಸರ್ಕಾರ ಉತ್ತಮವಾಗಿ ಸ್ಪಂದಿಸುವಂತೆ ಮಾಡುವಲ್ಲಿ ಯಶಸ್ವಿಯಾಗಿದೆ.

    ಸುಪ್ರಿಂ ಕೋರ್ಟಿನ ತೀರ್ಪಿನಂತೆ ಗ್ರ್ಯಾಚ್ಯುಟಿ ನೀಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಬೇಕು, ಅಂಗನವಾಡಿಗಳನ್ನು ಅನ್ನದ ಜೊತೆಗೆ ಅಕ್ಷರದ ಕೇಂದ್ರವಾಗಿಸಲು, ಅಂಗನವಾಡಿ ಕೇಂದ್ರಗಳಲ್ಲಿ ಶಾಲಾಪೂರ್ವ ಶಿಕ್ಷಣಕ್ಕೆ ನಿರ್ದಿಷ್ಟ ಸಮಯ ಮೀಸಲಿರಿಸಲು, ಶಿಕ್ಷಕಿ ಪದನಾಮ ನೀಡಲು, ಅಂಗನವಾಡಿಗೆ ಬರುವ ಮಕ್ಕಳಿಗೆ ಸಮವಸ್ತ್ರ, ಶೂ ನೀಡಲು ಹಾಗೂ ಅಂಗನವಾಡಿಯಲ್ಲಿ ಓದಿರುವ ಬಗ್ಗೆ ದೃಢೀಕರಣ ಪತ್ರ ನೀಡಲು, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸೇವಾ ನಿಯಮಾವಳಿ ರೂಪಿಸಲು, ಮಿನಿ ಅಂಗನವಾಡಿ ಹಾಗೂ ಸಹಾಯಕಿಯರಿಗೆ ಪದೋನ್ನತಿಗೆ ಇರುವ ಆದೇಶ ಮಾರ್ಪಡಿಸಲು, ಅಂಗನವಾಡಿ ಕೇಂದ್ರಗಳನ್ನು ಮೇಲ್ದೆರ್ಜೆಗೇರಿಸಲು, ಅಂಗನವಾಡಿಗೆ ಸ್ವಂತ ಕಟ್ಟಡ ಕಟ್ಟಲು 30 ಲಕ್ಷ ರೂ ಮೀಸಲಿರಿಸಲು ಹಾಗೂ ಮೂಲಸೌಕರ್ಯ ಬಲವರ್ಧನೆಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರಿ ಕೆಲಸದ ಒತ್ತಡ ಕಡಿಮೆ ಮಾಡಲು ಇತ್ಯಾದಿ ಪ್ರಮುಖ ಬೇಡಿಕೆಗಳಿಗೆ ಒತ್ತಾಯಿಸಿ ಈ ಹೋರಾಟ ಕಳೆದ ಹತ್ತು ದಿನಗಳಿಂದ ನಡೆಯುತ್ತಿತ್ತು. ಕೊರೆಯುವ ಚಳಿಯಲ್ಲಿಯೇ ಮಹಿಳೆಯರು ಈ ಐತಿಹಾಸಿಕ ಹೋರಾಟ ನಡೆಸಿದ್ದರು.

    300x250 AD

    ಹೋರಾಟದ ಬೆನ್ನಲ್ಲೇ ಸರ್ಕಾರದ ಸ್ಪಂದನೆಯ ಹಿನ್ನೆಲೆಯಲ್ಲಿ ಸಿಐಟಿಯು ಸಂಯೋಜಿತ ರಾಜ್ಯ ಅಂಗನವಾಡಿ ನೌಕರರ ಸಂಘವು ಕಳೆದ ಹತ್ತು ದಿನಗಳಿಂದ ಹಮ್ಮಿಕೊಂಡಿರುವ ಶಾಂತಿಯುತ ಅನಿರ್ದಿಷ್ಟಾವಧಿ ಹೋರಾಟವನ್ನು ಫೆ.1ರಂದು ಹಿಂಪಡೆಯಲು ನಿರ್ಧರಿಸಿದೆ. ಮುಷ್ಕರದ ವೇಳೆ ಕೆಲಸ ಸ್ಥಗಿತ ಗೊಳಿಸಿದ ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ತೆರೆದು ಪುನಃ ಕೆಲಸ ಪ್ರಾರಂಭಿಸಲು ನಿರ್ಧರಿಸಿದೆ ಎಂದು ಪ್ರಕಟಣೆ ತಿಳಿಸಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top