ಕಾರವಾರ: ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ಅದಾಲತನ್ನು ಫೆ.04ರಂದು ಬೆಳಿಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಹೆಸ್ಕಾಂ ಕಾರ್ಯ ಮತ್ತು ಪಾಲನಾ ಉಪವಿಭಾಗ ಕಚೇರಿಯಲ್ಲಿ ಆಯೋಜಿಸಲಾಗಿದೆ. ಮಧ್ಯಾಹ್ನ 3.30ರಿಂದ 5.30ರವರೆಗೆ ಗ್ರಾಹಕರ ಸಂವಾದ ಸಭೆಯನ್ನು ಆಯೋಜಿಸಲಾಗಿದೆ. ಗ್ರಾಹಕರು ತಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳೇನಾದರೂ ಇದ್ದಲ್ಲಿ ಸಭೆಗೆ ಹಾಜರಾಗಿ ತಮ್ಮ ಕುಂದು ಕೊರತೆಗಳ ಅಹವಾಲುಗಳನ್ನು ಸಲ್ಲಿಸುವಂತೆ ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫೆ.4ಕ್ಕೆ ವಿದ್ಯುತ್ ಅದಾಲತ್
