• Slide
    Slide
    Slide
    previous arrow
    next arrow
  • ಮಾ.15ರೊಳಗೆ ಜೆಜೆಎಂ ಕಾಮಗಾರಿ ಪೂರ್ಣಗೊಳಿಸಲು ಸಿಇಒ ಸೂಚನೆ

    300x250 AD

    ಮುಂಡಗೋಡ: ತಾಲೂಕಿನ ಮಳಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ವೀರಾಪುರ ಗ್ರಾಮದಲ್ಲಿರುವ ಬಹುಗ್ರಾಮ ಕುಡಿಯುವ ನೀರಿನ ಶುದ್ಧೀಕರಣ ಘಟಕದಿಂದ 3 ಗ್ರಾಪಂ ವ್ಯಾಪ್ತಿಯ 12 ಗ್ರಾಮಗಳಿಗೆ ಜೆಜೆಎಂ ಯೋಜನೆಯಡಿ ಸಂಪರ್ಕಗೊಂಡ ನಳಗಳಿಗೆ ನೀರು ಸರಬರಾಜು ಮಾಡುವ ಕಾಮಗಾರಿಗಳನ್ನು ಮಾ.15ರೊಳಗಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದೂ ಸ್ಥಳದಲ್ಲಿದ್ದ ಗುತ್ತಿಗೆದಾರ ಸುರೇಶ ಮುದ್ದಿ ಹಾಗೂ ಆರ್‌ಡಬ್ಲ್ಯುಎಸ್‌ನ ಇಇ, ಎಇಇ ಪಿಆರ್‌ಇಡಿಯ ಪ್ರಭಾರ ಎಇಇಗೆ ಸೂಚಿಸಿದರು.

    ಗ್ರಾಮೀಣ ಜನರಿಗೆ ಕುಡಿಯುವ ನೀರು ಪೂರೈಸುವಂತಹ ಮಹತ್ವದ ಯೋಜನೆ ಇದಾಗಿದ್ದು, 3.96 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ಪ್ರಸ್ತುತ ಬೇಸಿಗೆ ಸಮಯವಾಗಿರುವುದರಿಂದ ಜನರಿಗೆ ಕುಡಿಯುವ ನೀರಿನ ಅಗತ್ಯವಿದೆ. ಆದರೆ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದೆ ಎಂಬ ದೂರುಗಳಿದ್ದು, ಗುತ್ತಿಗೆದಾರರು ಹೆಚ್ಚಿನ ಆಸಕ್ತಿವಹಿಸಿ ಆದಷ್ಟು ಬೇಗ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಆರ್‌ಡಬ್ಲ್ಯುಎಸ್‌ನ ಇಇ, ಎಇಇ ಹಾಗೂ ಪಿಆರ್‌ಇಡಿಯ ಎಇಇ, ತಾಪಂ ಇಒ ಅವರು ಪ್ರಗತಿಯಲ್ಲಿರುವ ಕಾಮಗಾರಿಯ ಕುರಿತು ಮೇಲಿಂದಮೇಲೆ ಪರಿಶೀಲಿಸಿ ವಾರಕ್ಕೊಮ್ಮೆ ಪ್ರಗತಿ ವರದಿಯನ್ನು ಸಲ್ಲಿಸಬೇಕು ಎಂದು ತಿಳಿಸಿದರು.

    300x250 AD

    ನಂತರದಲ್ಲಿ ತಾಪಂ ಕಚೇರಿಯಲ್ಲಿ ಗ್ರಾಮ ಪಂಚಾಯತಿಗಳ ಆಸ್ತಿ ಮೌಲ್ಯಮಾಪನ ಪ್ರಗತಿ ಕುರಿತು ಸರಕಾರದ ಅಪರ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಜರುಗಿದ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡರು. ಇದಕ್ಕೂ ಮೊದಲು ಯಲ್ಲಾಪುರ ತಾಲೂಕಿನ ಇಡಗುಂದಿ ಗ್ರಾಪಂ ವ್ಯಾಪ್ತಿಯ ಲಿಂಗದಬೈಲ್ ಗ್ರಾಮಕ್ಕೆ ಭೇಟಿ ನೀಡಿದ ಸಿಇಒ ಅವರು, ಎನ್‌ಆರ್‌ಎಲ್‌ಎಂ ಯೋಜನೆಯಡಿ ಸಿದ್ದಿ ಸಮುದಾಯದ ಮಹಿಳೆಯರಿಗೆ ಲಭ್ಯವಿರುವ ಜೀವನೋಪಾಯ ಅವಕಾಶಗಳ ಕುರಿತು ಚರ್ಚಿಸಿದರು. ಜೊತೆಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಹಾಗೂ ನರೇಗಾ ಯೋಜನೆಯಡಿ ಪ್ರಗತಿಯಲ್ಲಿರುವ ಕಾಮಗಾರಿ, ಗ್ರಾಮ ಪಂಚಾಯತ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಬಗ್ಗೆ ಮಾಹಿತಿ ಪಡೆದುಕೊಂಡರು.

    Share This
    300x250 AD
    300x250 AD
    300x250 AD
    Leaderboard Ad
    Back to top