Slide
Slide
Slide
previous arrow
next arrow

ಫೆ.7ಕ್ಕೆ ರಾಜ್ಯಾಧ್ಯಕ್ಷರ ಪ್ರವಾಸ; ಬಿಜೆಪಿಗರ ಪೂರ್ವಭಾವಿ ಸಭೆ

300x250 AD

ಕಾರವಾರ: ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ಇದೇ ಫೆ.7 ರಂದು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿಯಲ್ಲಿ ಬೂತ್ ಅಧ್ಯಕ್ಷರು ಹಾಗು ಬಿಎಲ್‌ಎ 2 ಸಮಾವೇಶದ ಬಗ್ಗೆ ಪೂರ್ವಭಾವಿ ಸಭೆ ನಡೆಯಿತು.
ಸಭೆಯಲ್ಲಿ ರಾಜ್ಯಾಧ್ಯಕ್ಷರ ಸ್ವಾಗತದ ತಯಾರಿ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಈ ಕಾರವಾರ- ಅಂಕೋಲಾ ಕ್ಷೇತ್ರದ ಎಲ್ಲಾ ಬಿಜೆಪಿ ಮೋರ್ಚಾದ ಪದಾಧಿಕಾರಿಗಳು, ಬೂತ್ ಅಧ್ಯಕ್ಷರು, ಬಿಎಲ್‌ಎ- 2, ಪಕ್ಷದ ಹಿರಿಯರು, ಕಾರ್ಯಕರ್ತರು ಹಾಗೂ ಹಿತೈಷಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಉಪಸ್ಥಿತರಿದ್ದು ರಾಜ್ಯಾಧ್ಯಕ್ಷರ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಮುಖಂಡರು ಸಭೆಯಲ್ಲಿ ಕರೆಕೊಟ್ಟರು.
ಬಿಜೆಪಿಯ ಗ್ರಾಮೀಣ ಪ್ರಭಾರಿ ಗಜಾನನ ಗುನಗಾ, ನಗರ ಪ್ರಭಾರಿ ಆರತಿ ಗೌಡಾ, ಜಿಲ್ಲಾ ಉಪಾಧ್ಯಕ್ಷೆ ನಯನಾ ನೀಲಾವರ, ಬಿಜೆಪಿ ವಿಶೇಷ ಆವ್ಹಾನಿತ ಮನೋಜ ಭಟ್ಟ, ಜಿಲ್ಲಾ ಎಸ್‌ಸಿ ಮೋರ್ಚಾ ಅಧ್ಯಕ್ಷ ಉದಯ ಬಶೆಟ್ಟಿ, ಬಿಜೆಪಿ ನಗರಾಧ್ಯಕ್ಷ ನಾಗೇಶ ಕುರ್ಡೇಕರ, ಗ್ರಾಮೀಣ ಅಧ್ಯಕ್ಷ ಸುಭಾಷ್ ಗುನಗಿ ಸೇರಿದಂತೆ ಬಿಜೆಪಿ ನಗರ ಹಾಗೂ ಗ್ರಾಮೀಣ ಮೋರ್ಚಾದ ಎಲ್ಲಾ ಪದಾಧಿಕಾರಿಗಳು, ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರು, ಕಾರವಾರ ನಗರಸಭಾ ಸದಸ್ಯರು, ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಶಕ್ತಿ ಕೇಂದ್ರದ ಪ್ರಮುಖರು ಹಾಗೂ ಮಂಡಲ ಪ್ರಮುಖರುಗಳು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top