Slide
Slide
Slide
previous arrow
next arrow

ಬೋಟ್ ಇಂಜನ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

300x250 AD

ಕಾರವಾರ: ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ 30 ದಿನಗಳ ಕಾಲ ಬೋಟ್ ಇಂಜನ್ ರಿಪೇರಿ ತರಬೇತಿಯನ್ನು ಹಮ್ಮಿಕೊಂಡಿದೆ.

ಆಸಕ್ತ 18 ರಿಂದ 45 ವರ್ಷದೊಳಗಿನ ಯುವಕ, ಯುವತಿಯರು ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ,ವಿರ್ದ್ಯಾರ್ಹತೆ, ಇನ್ನಿತರ ವಿವರಗಳೊಂದಿಗೆ  ಫೆ 20 ರೊಳಗೆ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಗೆ ಪೋನ್ ಮೂಲಕ ವಿವರ ನೀಡಿ ತರಬೇತಿಗೆ ನೋಂದಾಯಿಸಿಕೊಳ್ಳಬಹುದು. ತರಬೇತಿಯು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿರುತ್ತದೆ. ತರಬೇತಿಯೊಂದಿಗೆ ಸಾಫ್ಟ್ ಸ್ಕೀಲ್ಸ್, ಯೋಗ ತರಬೇತಿ, ಬ್ಯಾಂಕಿಂಗ್, ಸಾರಕಾರಿ ಯೋಜನೆಗಳು ಮತ್ತು ಯೋಜನಾ ವರದಿಗಳ ತಯಾರಿಕೆಗಳ ಬಗೆಗೆ ಮಾಹಿತಿ ನೀಡಲಾಗುವುದು.

300x250 AD

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9986020262, 9482188780ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This
300x250 AD
300x250 AD
300x250 AD
Back to top