• Slide
    Slide
    Slide
    previous arrow
    next arrow
  • ಫೆ.25, 26ಕ್ಕೆ ಡಿವೈಎಫ್‌ಐ ರಾಜ್ಯ ಕಾರ್ಯಾಗಾರ

    300x250 AD

    ದಾಂಡೇಲಿ: ಉದ್ಯೋಗ ಸೃಷ್ಟಿಸಿ, ಸ್ಥಳೀಯರಿಗೆ ಆದ್ಯತೆ ಒದಗಿಸಿ ಹಾಗೂ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿ ಎಂಬ ಆಶಯದಡಿ ಡಿವೈಎಫ್‌ಐ ಸಂಘಟನೆಯ ರಾಜ್ಯ ಕರ‍್ಯಾಗಾರವನ್ನು ಇದೇ ಬರುವ ಫೆ.25 ಮತ್ತು 26ರಂದು ನಗರದ ಹಳೆದಾಂಡೇಲಿಯ ಹಾರ್ನ್ಬಿಲ್ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಡಿವೈಎಫ್‌ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಅವರು ಹೇಳಿದರು.
    ಡಿವೈಎಫ್‌ಐ ರಾಜ್ಯ ಕಾರ್ಯಾಗಾರದ ಲೋಗೋವನ್ನು ಅನಾವರಣಗೊಳಿಸಿ ಮಾತನಾಡಿ, ದೇಶವು ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿರುವ ಐತಿಹಾಸಿಕ ಹಾಗೂ ಮಹತ್ವದ ಸಂದರ್ಭದಲ್ಲಿ ದೇಶದ ಅತಿ ದೊಡ್ಡ ಮಾನವ ಸಂಪನ್ಮೂಲವಾಗಿರುವ ಯುವಜನರನ್ನು ಬಳಸಿಕೊಂಡು ದೇಶವನ್ನು ಅಭಿವೃದ್ಧಿಗೊಳಿಸಬೇಕಾದ ಸರಕಾರಗಳು ಯುವ ಜನರಿಗೆ ಹುಸಿ ಭರವಸೆ ನೀಡಿ ವಂಚಿಸುತ್ತಲೇ ಇವೆ. ಶಿಕ್ಷಣ, ಉದ್ಯೋಗ ಸಿಗದೇ ಹತಾಶೆಗೊಂಡಿರುವ ಯುವಜನತೆಗೆ ಆಳುವ ವರ್ಗ ಪರಿಹಾರ ಒದಗಿಸುವ ಬದಲು ಅವರ ಮನಸ್ಸಿನಲ್ಲಿ ಜಾತಿ, ಧರ್ಮಾಂಧತೆ ಬಿತ್ತುತ್ತಿರುವುದು ಅಪಾಯಕಾರಿಯಾಗಿದೆ ಎಂದರು.
    ದಾAಡೇಲಿಯಲ್ಲಿರುವ ಕೈಗಾರಿಕೆಗಳಲ್ಲಿ ಸ್ಥಳೀಯ ಯುವಜನರಿಗೆ ಉದ್ಯೋಗ ಒದಗಿಸಲು ಆದ್ಯತೆ ನೀಡಬೇಕೆಂದು ಆಗ್ರಹಿಸಿದ ಬಸವರಾಜ ಪೂಜಾರ ಅವರು ರಾಜ್ಯದಲ್ಲಿಯೇ ಹೆಚ್ಚಿನ ಪ್ರವಾಸಿ ತಾಣಗಳನ್ನು ಹೊಂದಿದ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಹಾಗೂ ಜೊಯಿಡಾ ಪರಿಸರದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಕ್ಷೇತ್ರದಲ್ಲಿ ವಿವಿಧ ಆಯಾಮಗಳಲ್ಲಿ ಉದ್ಯೋಗ ಸೃಷ್ಟಿಯೊಂದಿಗೆ ಸ್ಥಳೀಯರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಅಗತ್ಯ ಕ್ರಮವನ್ನು ಕೈಗೊಳ್ಳಬೇಕೆಂದು ಸರಕಾರವನ್ನು ಆಗ್ರಹಿಸಿದರು. ಹಲವು ವರ್ಷಗಳಿಂದ ದಾಂಡೇಲಿ, ಜೋಯಿಡಾ ಪ್ರದೇಶಗಳಲ್ಲಿ ಇರುವ ಭೂಮಿ ಮತ್ತು ನಿವೇಶನದ ಹಕ್ಕು ಬಗ್ಗೆ ಇರುವ ಸಮಸ್ಯೆಗಳನ್ನು ಕೂಡಲೆ ಬಗೆಹರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮವನ್ನು ಕೈಗೊಳ್ಳಬೇಕು. ಸ್ಥಳೀಯವಾಗಿರುವ ಮತ್ತು ಯುವ ಜನತೆಯನ್ನು ಮುಂದಿಟ್ಟುಕೊoಡು ನಿರುದ್ಯೋಗ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮವನ್ನು ಕೈಗೊಳ್ಳಬೇಕೆಂದು ಸರಕಾರವನ್ನು ಆಗ್ರಹಿಸುವ ನಿಟ್ಟಿನಲ್ಲಿ ಮತ್ತು ಯುವ ಜನತೆಯನ್ನು ಸಂಘಟಿಸುವ ನಿಟ್ಟಿನಲ್ಲಿ ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
    ಡಿವೈಎಫ್‌ಐ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಸ್ಯಾಮಸನ್ ಅವರು ರಾಜ್ಯ ಮಟ್ಟದ ಕಾರ್ಯಾಗಾರದ ರೂಪುರೇಷೆಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯಾಗಾರದ ಸ್ವಾಗತ ಸಮಿತಿಯ ಅಧ್ಯಕ್ಷರಾದ ಜಗದೀಶ್ ನಾಯ್ಕ, ಕಾರ್ಯಾಧ್ಯಕ್ಷರಾದ ಸಲೀಂ ಸೈಯದ್, ಖಜಾಂಚಿ ಇಮ್ರಾನ್ ಖಾನ್, ಸಲ್ಮಾನ್ ರಾಜ್, ಕಾಂತರಾಜ್, ವೆಂಕಟೇಶ್ ಲಮಾಣಿ, ಸದಾನಂದ ಕಾಂಬಳೆ, ಶಾಬೀರ್ ಮುಲ್ಲಾ, ಇಂಬ್ರಾನ್ ಶೇಖ್ ಮೊದಲಾದವರು ಇದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top