ಕಾರವಾರ: ಜಿಲ್ಲಾ ಮಟ್ಟದ ಸ್ಥಳೀಯ ದೂರುಗಳ ಸಮಿತಿಯನ್ನು ಜಿಲ್ಲಾಧಿಕಾರಿಗಳು 3 ವರ್ಷಗಳ ಅವಧಿಗೆ ರಚಿಸಿ ಆದೇಶಿಸಿದ್ದಾರೆ.
ಜಿಲ್ಲಾ ಮಟ್ಟದ ಸ್ಥಳೀಯ ದೂರುಗಳ ಸಮಿತಿಯ ಅಧ್ಯಕ್ಷರನ್ನಾಗಿ ಹೇಮಲತಾ ತಾಂಡೇಲ, ಅನಾಮಿಕಾ ಎಮ್.ರಾಣೆ, ವಿವೇಕಲತಾ ಎಸ್.ಫರ್ನಾಂಡಿಸ್ ಹಾಗೂ ಸಪ್ನಾ ಆರ್.ಗುನಗಿ ಅವರನ್ನು ಸದ್ಯಸರನ್ನಾಗಿ ನೇಮಿಸಿ ಆದೇಶಿಸಿದ್ದಾರೆ. ಈ ಸಮಿತಿಯು ಜಿಲ್ಲೆಯಲ್ಲಿ ಸರ್ಕಾರಿ ಅಥವಾ ಅರೆ ಸರ್ಕಾರಿ ಕಚೇರಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಮಹಿಳೆಯರಿಗೆ ಲೈಂಗಿಕ ಕಿರುಕುಳದ ಸಮಸ್ಯೆ ಉಂಟಾದಲ್ಲಿ ಸದರಿ ಸಮಿತಿಯ ಮೂಲಕ ಪರಿಹಾರ ಕಂಡುಕೊಳ್ಳಬಹುದು ಎಂದು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಮಟ್ಟದ ಸ್ಥಳೀಯ ದೂರುಗಳ ಸಮಿತಿ ರಚನೆ
