ಕಾರವಾರ: ಕಾರ್ಮಿಕ ಇಲಾಖೆಯು ಫೆ.25ರಂದು ಬೋಗಸ್ ಕಾರ್ಡ್ ನೋಂದಣಿ ರದ್ಧತಿ ಅಭಿಯಾನವನ್ನು ಹಮ್ಮಿಕೊಂಡಿದೆ. ನಕಲಿ ದಾಖಲೆ ಸೃಷ್ಟಿಸಿ ಗುರುತಿನ ಚೀಟಿ ಪಡೆದಿರುವ ಕಟ್ಟಡ ಕಾರ್ಮಿಕರಲ್ಲದ ಫಲಾನುಭವಿಗಳ ಕಾರ್ಡಗಳನ್ನು ರಾದ್ದುಪಡಿಸಲು ಈ ಅಭಿಯಾನ ಹಮ್ಮಿಕೊಂಡಿದೆ.
ನಕಲಿ ದಾಖಲೆ ಸೃಷ್ಟಿಸಿ ಗುರುತಿನ ಚೀಟಿ ಪಡೆದಿರುವ ಕಟ್ಟಡ ಕಾರ್ಮಿಕರಲ್ಲದ ಫಲಾನುಭವಿಗಳು ತಮ್ಮ ಸ್ವ-ಇಚ್ಛೆಯಿಂದ ಎಲ್ಲಾ ತಾಲೂಕಿನ ಕಾರ್ಮಿಕ ನಿರೀಕ್ಷಕರ ಕಛೇರಿಗೆ ತೆರಳಿ ಮೂಲ ಗುರುತಿನ ಚೀಟಿಗಳನ್ನು ಸಲ್ಲಿಸಲು ಸೂಚಿಸಲಾಗಿದೆ. ಇಲ್ಲವಾದಲ್ಲಿ ಕಾರ್ಮಿಕ ನಿರೀಕ್ಷಕರು ಖುದ್ದು ಸ್ಥಳ ಪರಿಶೀಲಿಸಿ ನಕಲಿ ದಾಖಲೆ ಸೃಷ್ಟಿಸಿ ಗುರುತಿನ ಚೀಟಿ ಪಡೆದಿರುವ ಮತ್ತು ಸೌಲಭ್ಯಗಳನ್ನು ಪಡೆದ ಫಲಾನುಭವಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.