ದಾಂಡೇಲಿ: ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಕಾರ್ಯದರ್ಶಿಯಾಗಿ ನಗರದ ಕಾಂಗ್ರೆಸ್ ಮುಖಂಡರಾದ ರಫೀಕ್ ಅಹ್ಮದ್ ಖಾನ್ ಅವರನ್ನು ನೇಮಕ ಮಾಡಲಾಗಿದೆ. ಕಳೆದ ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ರಫೀಕ್ ಅಹ್ಮದ್ ಖಾನ್ ಹಲವಾರು ಸಂಘ- ಸಂಸ್ಥೆಗಳಲ್ಲಿಯೂ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ. ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿಯಾಗಿ ನೇಮಕವಾಗಿರುವ ರಫೀಕ್ ಅಹ್ಮದ್ ಖಾನ್ ಅವರನ್ನು ನಗರದ ಗಣ್ಯರನೇಕರು ಅಭಿನಂದಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿಯಾಗಿ ರಫೀಕ್ ನೇಮಕ
