ಹಳಿಯಾಳ: ಭಾರತಕ್ಕೆ ಸ್ವಾತಂತ್ರ್ಯ ದೊರಕಿ 75 ವರ್ಷಗಳಾಗುತ್ತಿದ್ದು ಭಾರತ ಸ್ವಾತಂತ್ರ್ಯದ ವಜ್ರ ಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯ ಹೋರಾಟಗಾರರಿಗೆ ಶಾಸಕ ಆರ್.ವಿ.ದೇಶಪಾಂಡೆ ಸನ್ಮಾನ ಮಾಡಿ ಗೌರವ ಸಮರ್ಪಿಸಿದರು.
ತಾಲೂಕಿನ ಮಂಗಳವಾಡ ಗ್ರಾಮದ ಸ್ವಾತಂತ್ರ್ಯ ಹೋರಾಟಗಾರರಾದ ‘ ಮಂಗೇಶ ಕೃಷ್ಣಾ ಪಾಟೀಲ’ ಅವರಿಗೆ ಶಾಲು ಹೊದೆಸಿ ಸನ್ಮಾನಿಸಿ ದೇಶಕ್ಕಾಗಿ ಹೋರಾಡಿದ ಅವರ ಕಾರ್ಯಕ್ಕೆ ಗೌರವವನ್ನು ಸಮರ್ಪಿಸಿದರು.
ಈ ಸಂದರ್ಭದಲ್ಲಿ ಜಿ.ಪಂ.ಮಾಜಿ ಉಪಾಧ್ಯಕ್ಷ ಸಂತೋಷ ರೇಣಕೆ, ಮಾಜಿ ಅಧ್ಯಕ್ಷ ಕೃಷ್ಣಾ ಪಾಟೀಲ ಹಾಗೂ ಮುಂತಾದವರು ಉಪಸ್ಥಿತರಿದ್ದರು.