ಕಾರವಾರ: ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿಯವರು 18ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ- ಯುವತಿಯರಿಗಾಗಿ 10 ದಿನಗಳ ಕುರಿ ಸಾಗಾಣಿಕೆ ತರಬೇತಿಯನ್ನು ಮಾರ್ಚ್ ತಿಂಗಳಿನಲ್ಲಿ ಹಮ್ಮಿಕೊಂಡಿದ್ದಾರೆ.
ಆಸಕ್ತರು ತಮ್ಮ ಹೆಸರು, ವಿಳಾಸವನ್ನು ನೋಂದಾಯಿಸಿಕೊಳ್ಳಲು ಫೆ.28 ಕೊನೆಯ ದಿನಾಂಕವಾಗಿರುತ್ತದೆ. ತರಬೇತಿಯು ಊಟ ವಸತಿ ಸಂಪೂರ್ಣ ಉಚಿತವಾಗಿರುತ್ತದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲು ಆದ್ಯತೆ ನೀಡಲಾಗುವುದು. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿoದ ಸಾಲ ಪಡೆದ ಸ್ವ- ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳು ಮತ್ತು ವರದಿ ತಯಾರಿಕೆ ಇನ್ನೇತರ ಮಾಹಿತಿಗಳನ್ನು ಉಚಿತವಾಗಿ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ ನಿರ್ದೇಶಕರು ಹಾಗೂ ದೂರವಾಣಿ ಸಂಖ್ಯೆ: 9482188780, 9483485489, 9742438790, 08284220807 ಗೆ ಸಂಪರ್ಕಿಸಿ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುರಿ ಸಾಗಾಣಿಕೆ ತರಬೇತಿಗೆ ಅರ್ಜಿ ಆಹ್ವಾನ
