ಶಿರಸಿ: ತಾಲೂಕಿನ ಬನವಾಸಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶಿರಸಿ ವತಿಯಿಂದ ತಾಲೂಕಾ ಮಾನಸಿಕ ಆರೋಗ್ಯ ಕಾರ್ಯಕ್ರಮವನ್ನು ಗುರುವಾರ ಆಯೋಜಿಸಲಾಗಿತ್ತು.
ಈ ವೇಳೆಯಲ್ಲಿ ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯದ ಸುಧಾರಣೆಯಲ್ಲಿ ಸಮುದಾಯದ ಪಾತ್ರ ಎಂಬ ವಿಷಯದ ಕುರಿತಂತೆ ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಕಾಲೇಜಿನ ಪ್ರಾಚಾರ್ಯ ಎಂ.ಕೆ.ನಾಯ್ಕ ಹೊಸಳ್ಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾಲೂಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾನಸಿಕ ಆರೋಗ್ಯ ಕಾರ್ಯಕ್ರಮದ ಅಧಿಕಾರಿ ವಿಜಯ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಾನಸಿಕವಾಗಿ ಅಸ್ವಸ್ಥರಾದವರಿಗೆ ಮುಖ್ಯ ವಾಹಿನಿಯಲ್ಲಿ ಅವರನ್ನು ತರುವುದಕ್ಕೋಸ್ಕರ ಸಮಾಜ ಪ್ರಯತ್ನ ಮಾಡಬೇಕಾಗಿದೆ. ಅವರನ್ನು ಜನಸಾಮಾನ್ಯರಂತೆ ಮುಖ್ಯ ವಾಹಿನಿಯಲ್ಲಿ ತರುವುದಕ್ಕೆ ಅನೇಕ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದರು.
ಭಾಷಣ ಸ್ಪರ್ಧೆಯಲ್ಲಿ ದೀಕ್ಷಿತಾ ವಿ. ಪ್ರಥಮ ಸ್ಥಾನವನ್ನು ,ಉಷಾ ಆರ್. ದ್ವಿತೀಯ ಸ್ಥಾನವನ್ನು ಹಾಗೂ ದಿವ್ಯಾ ಸಿ. ಗೌಡ್ರು ತೃತೀಯ ಸ್ಥಾನವನ್ನು ಗಳಿಸಿದರು. ವಿಜೇತ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ನಗದು ಬಹುಮಾನವನ್ನು ವಿತರಿಸಲಾಯಿತು. ಉಪನ್ಯಾಸಕರಾದ ಅಶೋಕ ಶೆಟ್ಟಿ ಸ್ವಾಗತಿಸಿದರು. ತನುಜಾ ನಾಯ್ಕ ನಿರೂಪಿಸಿ, ವಂದಿಸಿದರು.