• Slide
    Slide
    Slide
    previous arrow
    next arrow
  • ಸವಿತಾ ಸಮಾಜ ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಸಧೃಡವಾಗಬೇಕಿದೆ: ಉಪೇಂದ್ರ ಪೈ

    300x250 AD

    ಸಿದ್ದಾಪುರ : ಸವಿತಾ ಮಹರ್ಷಿ ಜಯಂತಿ ಆಚರಣೆಯಿಂದ ಸಮುದಾಯದ ಜನರನ್ನು ಸಂಘಟಿಸಲು ಸಹಾಯವಾಗುತ್ತದೆ, ಕಡಿಮೆ ಜನಸಂಖ್ಯೆ ಹೊಂದಿರುವ ಸವಿತಾ ಸಮಾಜದವರು ಶೈಕ್ಷಣಿಕವಾಗಿ ಅಭಿವೃದ್ದಿಹೊಂದಿದೆರೆ ಮಾತ್ರ ಸಮುದಾಯ ವ್ಯಕ್ತಿಗಳು ಮುಖ್ಯವಾಹಿನಿಗೆ ಬರಲು ಸಾದ್ಯ ಎಂದು ಉಪೇಂದ್ರ ಪೈ ಸೇವಾ ಟ್ರಸ್ಟ್ ಅಧ್ಯಕ್ಷ ಉಪೇಂದ್ರ ಪೈ ಹೇಳಿದರು.

    ಅವರು ಪಟ್ಟಣದ ರಾಘವೇಂದ್ರ ಮಠದ ಸಭಾಂಗಣದಲ್ಲಿ ತಾಲೂಕು ಸವಿತಾ ಸಮಾಜ ಸಂಘದ ಆಶ್ರಯದಲ್ಲಿ ಸವಿತಾ ಮಹರ್ಷಿ ಜಯಂತಿ ಅಂಗವಾಗಿ ಸಾಮೂಹಿಕ ಸತ್ಯನಾರಾಯಣ ವೃತ,ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಗುರುಗಳ ಹಾದಿಯಲ್ಲಿ ಸಾಗಿ ಆಚಾರ-ವಿಚಾರ ಮೈಗೊಡಿಸಿಕೊಂಡರೆ ಸಮಾಜದಲ್ಲಿ ಸತ್ಪ್ರಜೆಗಳಾಗಬಹುದು, ಸವಿತಾ ಸಮಾಜ ಎಲ್ಲಾ ವರ್ಗದ ಜನರಿಗೂ ತಾತರಮ್ಯವಿಲ್ಲದೆ ಸೇವೆ ನೀಡುತ್ತಿದೆ, ಹಾಗಾಗಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಈ ಸಮುದಾಯ ಸಧೃಡವಾಗಬೇಕಿದೆ, ಸವಿತಾ ಸಮಾಜ ಶುಭಕಾರ್ಯಗಳಿಗೆ ಮುಂದಿರುತ್ತದೆ, ಆದರೆ ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರಲು ಮುಖಂಡರಿಗೆ ಸಾಧ್ಯವಾಗುತ್ತಿಲ್ಲ, ಸಂಘಟಿತರಾಗುವ ಮೂಲಕ ಸರ್ಕಾರದ ಯೋಜನೆಗಳ ಪ್ರಯೋಜನ ಪಡೆಯಬೇಕು ಎಂದು ತಿಳಿಸಿದರು.ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಕೊಂಚೂರು ಸವಿತಾ ಪೀಠದ ಶ್ರೀಧರಾನಂದ ಸರಸ್ವತಿ ಸ್ವಾಮೀಜಿ ಮಾತನಾಡಿ ಸವಿತಾ ಸಮಾಜ ಎಂದೂ ಕಲ್ಪವೃಕ್ಷ ಇದ್ದ ಹಾಗೆ. ಎಲ್ಲ ಸಮಾಜದವರಿಗೂ ಸವಿತಾ ಸಮಾಜ ಬೇಕು. ಸನಾತನ ಧರ್ಮ ಉಳಿಯಬೇಕು ಸವಿತಾ ಸಮಾಜ ಬೆಳೆಯಬೇಕು. ಸಮಾಜದ ಪ್ರತಿಯೊಬ್ಬರೂ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.

    300x250 AD

    ಕಾರ್ಯಕ್ರಮದಲ್ಲಿ ಸಮುದಾಯದಲ್ಲಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹನೀಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕೃಷ್ಣ ಕುಮಾರ್ ದೊಡ್ಮನಿ, ರವಿ ಹೆಗಡೆ ವಕೀಲರು, ಪ್ರಕಾಶ್ ಹುಲೇಕಲ್, ಅಧ್ಯಕ್ಷ ಸತೀಶ ಕೊಡಿಯಾ , ಆನಂದ ಮಹಾಲೆ, ಚಂದ್ರಶೇಖರ ಎನ್ ಕೊಡಿಯಾ, ವಿನಾಯಕ ಮಹಾಲೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು. 

    Share This
    300x250 AD
    300x250 AD
    300x250 AD
    Leaderboard Ad
    Back to top