ಕುಮಟಾ: ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲೆಯಲ್ಲಿ ನಡೆಯಲಿರುವ ಪ್ರಜಾಧ್ವನಿ ಯಾತ್ರೆಯ ಪೂರ್ವಭಾವಿ ಸಭೆ ನಡೆಯಿತು.
ಪ್ರಜಾಧ್ವನಿ ಯಾತ್ರೆಯ ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ನಿವೇದಿತ ಆಳ್ವಾ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾಂವ್ಕರ್ ಅವರ ನೇತೃತ್ವದಲ್ಲಿ, ಮಾಜಿ ಸಚಿವರು, ಮಾಜಿ ಶಾಸಕರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪಕ್ಷದ ಮುಖಂಡರ ಉಪಸ್ಥಿತಿಯಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ನಿವೇದಿತ ಆಳ್ವಾ ಮಾತನಾಡಿದರು. ವಿಧಾನಪರಿಷತ್ ವಿರೋಧ ಪಕ್ಷದ ನಾಯಕರಾದ ಬಿ.ಕೆ.ಹರಿಪ್ರಸಾದ್, ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ವಿ.ದೇಶಪಾಂಡೆ ಹಾಗೂ ಇತರ ಮುಖಂಡರ ನೇತೃತ್ವದಲ್ಲಿ ನಡೆಯುತ್ತಿರುವ ಪ್ರಜಾಧ್ವನಿ ಯಾತ್ರೆ ಫೆ.16ರಂದು ಕುಮಟಾ- ಹೊನ್ನಾವರ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಕುಮಟಾದಲ್ಲಿ 3 ಕಡೆ ಹಾಗೂ ಹೊನ್ನಾವರದಲ್ಲಿ ಒಂದು ಕಡೆ ಸಭೆ ನಡೆಸುವ ಕುರಿತು ತೀರ್ಮಾನಿಸಲಾಯಿತು. ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಉದ್ದೇಶದಿಂದ ಹೆಚ್ಚಿನ ಜನ ಸೇರಿಸುವ ಜವಾಬ್ದಾರಿಯನ್ನು ನಾಯಕರಿಗೆ ನೀಡಲಾಯಿತು.
ಈ ಸಂದರ್ಭದಲ್ಲಿ ಟರ್ಕಿಯಲ್ಲಿ ನಡೆದ ಭೀಕರ ಭೂಕಂಪದಿಂದ ಪ್ರಾಣ ಕಳೆದುಕೊಂಡ ಜನರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ನಡೆಸಲಾಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡು ಕುಮಟಾಕ್ಕೆ ಆಗಮಿಸಿದ ಸಾಯಿ ಗಾಂವ್ಕರ್ ಅವರಿಗೆ ಹಾಗೂ ಪ್ರಜಾಧ್ವನಿ ಕಾರ್ಯಕ್ರಮದ ಉಸ್ತುವಾರಿಗಳಾದ ನಿವೇದಿತ ಆಳ್ವ ಅವರನ್ನು ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಹಾಗೂ ಕುಮಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಎಲ್.ನಾಯ್ಕ ಅವರು ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು.
ಪೂರ್ವಭಾವಿ ಸಭೆಯಲ್ಲಿ ಮಾಜಿ ಸಚಿವರಾದ ಆರ್.ಎನ್.ನಾಯ್ಕ, ಉತ್ತರ ಕನ್ನಡ ಪ್ರಚಾರ ಸಮಿತಿ ಅಧ್ಯಕ್ಷರು, ಮಾಜಿ ಶಾಸಕರಾದ ಜೆ.ಡಿ.ನಾಯ್ಕ, ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಗದೀಪ ತೆಂಗೇರಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಹೊನ್ನಪ್ಪ ನಾಯಕ, ಪ್ರಮುಖರಾದ ಶಿವಾನಂದ ಹೆಗಡೆ ಕಡತೋಕಾ, ನಾಗೇಶ್ ನಾಯ್ಕ, ಸುಜಾತಾ ಗಾಂವ್ಕರ್, ಯಶೋಧರ ನಾಯ್ಕ, ರತ್ನಾಕರ ನಾಯ್ಕ, ಮಂಜುನಾಥ ನಾಯ್ಕ, ಮಧುಸೂದನ ಶೇಟ್, ಪ್ರದೀಪ ನಾಯಕ, ಮಧುಸೂದನ ಶೇಟ್, ಇತರರು ಇದ್ದರು.