ಜೊಯಿಡಾ: ಪ್ರಸಿದ್ಧ ಜಾತ್ರೆಗಳಲ್ಲಿ ಒಂದಾದ ಶ್ರೀಕ್ಷೇತ್ರ ಉಳವಿ ಜಾತ್ರೆ ಮುಕ್ತಾಯಗೊಂಡಿದ್ದು, ಉಳವಿ ಗ್ರಾಮ ಪಂಚಾಯತಿ ಮತ್ತು ಉಳವಿ ಚನ್ನಬಸವೇಶ್ವರ ಟ್ರಸ್ಟ್ ಕಮಿಟಿಯಿಂದ ಸ್ವಚ್ಚತಾ ಕಾರ್ಯ ನಡೆಯುತ್ತಿದೆ.
ಜಾತ್ರೆಗೆ ಲಕ್ಷಾಂತರ ಜನರು ಸೇರುವುದರಿಂದ ಪ್ಲಾಸ್ಟಿಕ್ ಕಸ ಹಾಗೂ ಕಸಕಡ್ಡಿಗಳನ್ನು ಜನರು ಚೆಲ್ಲುತ್ತಾರೆ. ಕಳೆದ ಎರಡು ದಿನಗಳಿಂದ ಉಳವಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಮಂಜುನಾಥ ಮೋಕಾಶಿ ಹಾಗೂ ಅಭಿವೃದ್ಧಿ ಅಧಿಕಾರಿ ಮಹಮ್ಮದ್ ಹನೀಫ್ ಅವರ ಮುಂದಾಳತ್ವದಲ್ಲಿ ಸ್ವಚ್ಚತಾ ಕಾರ್ಯ ಭರದಿಂದ ಸಾಗಿದೆ.