ಕುಮಟಾ: ಫೆ.28ರಂದು ನಡೆಯಲಿರುವ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಶಾಸಕ ದಿನಕರ ಶೆಟ್ಟಿ ಸೂಚಿಸಿದರು.
ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ತಾಲೂಕಾ 9ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ತಾಲೂಕಿನಲ್ಲಿ ನಡೆಯುವ ಅಕ್ಷರ ಜಾತ್ರೆಯು ಅತ್ಯಂತ ಯಶಸ್ವಿಯಾಗಿ ನಡೆಯಲು ತಾಲೂಕಿನ ಎಲ್ಲಾ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸಬೇಕು. ಸಮ್ಮೇಳನದಲ್ಲಿ ವಿವಿಧ ವಿಚಾರಗೋಷ್ಠಿಗಳನ್ನು ಸಾಂಸ್ಕೃತಿಕ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಬೇಕು. ಸಮ್ಮೇಳನಕ್ಕೆ ಬರುವ ಜನರಿಗೆ ವಿಶೇಷ ಬಸ್ ವ್ಯವಸ್ಥೆ ಮಾಡಲು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು. ಸಮ್ಮೇಳನವು ಆಕರ್ಷಣೀಯವಾಗಿ ನಡೆಯುವಂತೆ ಪರಿಷತ್ತು ಕ್ರಮವಹಿಸಬೇಕು ಎಂದರು.
ಸಭೆಯಲ್ಲಿ ತಾಪಂ ಇಒ ನಾಗರತ್ನ ನಾಯಕ, ತಹಸೀಲ್ದಾರ್ ವಿವೇಕ ಶೇಣ್ವಿ, ಜಿಲ್ಲಾ ಕಾರ್ಯದರ್ಶಿ ಪಿ.ಆರ್. ನಾಯ್ಕ, ಕಸಾಪ ಅಧ್ಯಕ್ಷ ಸುಬ್ಬಯ್ಯ ನಾಯ್ಕ, ಸಾಹಿತಿಗಳಾದ ಬೀರಣ್ಣ ನಾಯಕ, ಎನ್.ಆರ್.ಗಜು, ಪರಿಷತ್ತಿನ ಪದಾಧಿಕಾರಿಗಳಾದ ಪ್ರಮೋದ ನಾಯ್ಕ, ಗಿರೀಶ್ ವನ್ನಳ್ಳಿ, ಜಿಲ್ಲಾ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳಾದ ಪಿ.ಎಂ. ಮುಕ್ರಿ, ಸುರೇಶ ಭಟ್ಟ, ಪ್ರಕಾಶ ನಾಯ್ಕ ಹಾಗೂ ತಾಲೂಕಿನ ಎಲ್ಲಾ ಅಧಿಕಾರಿಗಳು, ಪರಿಷತ್ತಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.