ಕಾರವಾರ: 75 ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಭಾನುವಾರ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ನಗರದ ಪೋಲಿಸ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ, ಜಿಲ್ಲೆಯ ಜನತೆಯನ್ನು ಉದ್ದೇಶಿಸಿ ಮಾತನಾಡಿದರು.
ಧ್ವಜಾರೋಹಣದ ನಂತರ ಕವಾಯತು ವೀಕ್ಷಣೆ ಮಾಡಿದ ಸಚಿವ ಹೆಬ್ಬಾರ್, ವಿವಿಧ ಪಡೆಗಳಿಂದ ಗೌರವ ವಂದನೆಯನ್ನು ಸ್ವೀಕರಿಸಿದರು. ನಂತರ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಜಿಲ್ಲೆಯ ಹೆಮ್ಮೆಯ ಸಾಧಕರನ್ನು ಸನ್ಮಾನಿಸಿ ಗೌರವಿಸಿದರು.
ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ನೀಡಲಾಗುವ “ಸುರಕ್ಷಾ ಕಿಟ್” ಅನ್ನು ಸ್ಥಳೀಯ ಕಾರ್ಮಿಕರಿಗೆ ಈ ಸಂದರ್ಭದಲ್ಲಿ ಸಚಿವ ಹೆಬ್ಬಾರ್ ವಿತರಿಸಿದರು.
ಈ ಸಂದರ್ಭದಲ್ಲಿ ಶಾಸಕಿ ಶ್ರೀಮತಿ ರೂಪಾಲಿ ನಾಯ್ಕ, ಜಿಲ್ಲಾಧಿಕಾರಿ ಎಂ.ಪಿ. ಮುಲೈ ಮುಹಿಲನ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಶೀಲ್ದಾರ ಹಾಗೂ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.