ಭಟ್ಕಳ: ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಜೆ.ಇ.ಇ.) ಮೈನ್ 2023ರ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ನಗರದ ಸಿದ್ದಾರ್ಥ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದ್ದು, ಜೆಇಇ ಮೈನ್ 2023 ಪರೀಕ್ಷೆಯಲ್ಲಿ ಕ್ರಮವಾಗಿ ಸಿ.ಆರ್. ಪೂರ್ಣಿಮಾ ಶೇ.93.79 (ಭೌತಶಾಸ್ತ್ರ ಶೇ.96), ಗಣೇಶ ಕಿಣಿ ಶೇ.92.44, ಸುಚಿತ್ರಾ ಶೇಟ್ ಶೇ.92.38 (ಭೌತಶಾಸ್ತ್ರ ಶೇ.97), ದೀಪ್ತಿ ಭಟ್ ಶೇ.91.08, ಪ್ರಂದ್ಯಾ ನಾಯ್ಕ ಶೇ.89.96, ಪ್ರಣಮ್ಯ ರಾಯಕರ್ ಶೇ.85.94 ಪಡೆದು ಜೆಇಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷೆ ಅರ್ಚನಾ ಯು. ಹಾಗೂ ಸದಸ್ಯರು, ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವರ್ಗ ಅಭಿನಂದಿಸಿದ್ದಾರೆ.