ಬೆಂಗಳೂರು: ಸುಪ್ರೀಂ ಕೋರ್ಟ್ ಹಾಗೂ ಕರ್ನಾಟಕ ಹೈಕೋರ್ಟ್ ನಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದ ಕನ್ನಡಿಗ ಎಸ್. ಅಬ್ದುಲ್ ನಜೀರ್ ಅವರನ್ನು ಆಂಧ್ರ ಪ್ರದೇಶದ ನೂತನ ರಾಜ್ಯಪಾಲರಾಗಿ ನೇಮಕ ಮಾಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.
ನೂತನವಾಗಿ ಆಂದ್ರ ಪ್ರದೇಶದ ರಾಜ್ಯಪಾಲರಾಗಿ ನಿಯುಕ್ತಿಗೊಂಡಿರುವ ಹೆಮ್ಮೆಯ ಕನ್ನಡಿಗ ಎಸ್. ಅಬ್ದುಲ್ ನಜೀರ್ ರವರಿಗೆ ಹಾರ್ದಿಕ ಅಭಿನಂದನೆಗಳು. ಮೂಲತಃ ಮಂಗಳೂರಿನ ಬೆಳುವಾಯಿಯವರಾದ ಇವರು ಕರ್ನಾಟಕದ ಉಚ್ಛ ನ್ಯಾಯಾಲಯದಲ್ಲಿ ವಕೀಲರಾಗಿ ಸೇವೆ ಸಲ್ಲಿಸಿ, ನಂತರ ಸುಪ್ರಿಂ ಕೋರ್ಟ್ ನಲ್ಲಿ ನ್ಯಾಯಾಧೀಶರಾಗಿ, ನಿವೃತ್ತರಾಗಿದ್ದರು ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಇನ್ನು ಆಂಧ್ರ ಪ್ರದೇಶದ ನೂತನ ರಾಜ್ಯಪಾಲರಾಗಿ ನಿಯುಕ್ತಿಗೊಂಡಿರುವ ನಮ್ಮ ಮಂಗಳೂರಿನ ಬೆಳುವಾಯಿ ಗ್ರಾಮದ ಎಸ್.ಅಬ್ದುಲ್ ನಜೀರ್ ಅವರಿಗೆ ಅಭಿನಂದನೆಗಳು ಎಂದು ಪ್ರಹ್ಲಾದ್ ಜೋಶಿ ಅವರು ಟ್ವೀಟ್ ಮಾಡಿದ್ದಾರೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸಹ ಅಬ್ದುಲ್ ನಜೀರ್ ಅವರನ್ನು ಅಭಿನಂದಿಸಿದ್ದು, ಸುಪ್ರೀಂ ಕೋರ್ಟ್ ಹಾಗೂ ಕರ್ನಾಟಕ ಹೈಕೋರ್ಟ್ಗಳಲ್ಲಿ ನ್ಯಾಯಾಧೀಶರಾಗಿ ಉತ್ತಮ ಸೇವೆ ಸಲ್ಲಿಸಿ, ಪ್ರಸ್ತುತ ಆಂಧ್ರಪ್ರದೇಶದ ರಾಜ್ಯಪಾಲರಾಗಿ ನೇಮಕಗೊಂಡಿರುವ ಎಸ್. ಅಬ್ದುಲ್ ನಜೀರ್ ಅವರಿಗೆ ಹಾರ್ದಿಕ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ.