Slide
Slide
Slide
previous arrow
next arrow

ಪ್ರಗತಿ ಮೀಡಿಯಾದ ಎಂ.ಕೆ. ಹೆಗಡೆಗೆ ವಿಪ್ರಶ್ರೀ ಪ್ರಶಸ್ತಿ

300x250 AD

ಶಿರಸಿ: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸಾಧಕರಿಗೆ ಕೊಡಮಾಡುವ ವಿಪ್ರಶ್ರೀ ಪ್ರಶಸ್ತಿಗೆ ಪ್ರಗತಿ ವಾಹಿನಿ ವೆಬ್ ನ್ಯೂಸ್ ಪ್ರಧಾನ ಸಂಪಾದಕ ಹಾಗೂ ಪ್ರಗತಿ ಮೀಡಿಯಾ ಹೌಸ್ ಸಂಸ್ಥಾಪಕ, ಹಿರಿಯ ಪತ್ರಕರ್ತ ಎಂ.ಕೆ. ಹೆಗಡೆ ಭಾಜನರಾಗಿದ್ದಾರೆ.
ಬೆಳಗಾವಿಯ ಸಿಟಿ ಹಾಲ್‌ನಲ್ಲಿ ನಡೆದ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಸಮಾರಂಭದಲ್ಲಿ ಮಂಡಳಿಯ ಅಧ್ಯಕ್ಷ ಎಚ್. ಎಸ್. ಸಚ್ಚಿದಾನಂದಮೂರ್ತಿ ಹಾಗೂ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ್ ಪ್ರಶಸ್ತಿ ಪ್ರದಾನ ಮಾಡಿದರು. ಬೆಳಗಾವಿ ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಎಸ್. ಎಂ. ಕುಲಕರ್ಣಿ,ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಹಲವು ನಿರ್ದೇಶಕರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಮೂಲತಃ ಶಿರಸಿ ತಾಲೂಕಿನ ಕಲ್ಮನೆಯವರಾದ ಎಂ.ಕೆ. ಹೆಗಡೆ ಕಳೆದ 28 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕನ್ನಡ ಜನಾಂತರಂಗ ಪತ್ರಿಕೆಯ ಹಿರಿಯ ವರದಿಗಾರರಾಗಿ, ಬೆಳಗಾವಿಯಲ್ಲಿ ಕನ್ನಡ ಪ್ರಭಾ ಪತ್ರಿಕೆಯ ಪ್ರಧಾನ ವರದಿಗಾರಾಗಿ, ವಿಜಯವಾಣಿ ಪತ್ರಿಕೆಯ ಬೆಳಗಾವಿ ಸ್ಥಾನಿಕ ಸಂಪಾದಕರಾಗಿ, ವಿಜಯ ಕರ್ನಾಟಕದ ಸೀನಿಯರ್ ಅಸಿಸ್ಟಂಟ್ ಎಡಿಟರ್ ಆಗಿ, ಬೆಳಗಾವಿ ಆವೃತ್ತಿಯ ಸ್ಥಾನಿಕ ಸಂಪಾದಕರಾಗಿ ಕಾರ್ಯ ನಿರ್ವಹಿದ್ದಾರೆ. ಸಧ್ಯ ಪ್ರಗತಿವಾಹಿನಿ ಇ ಪೇಪರ್ ನಡೆಸುತ್ತಿದ್ದಾರೆ.

ಅವರಿಗೆ ಈಗಾಗಲೇ ಬೆಳಗಾವಿಯ ಸಾರ್ವಜನಿಕ ವಾಚನಾಲಯದಿಂದ ಕೊಡಮಾಡುವ ರಾಜ್ಯಾಧ್ಯಕ್ಷ ಪ್ರಶಸ್ತಿ, ಸಿರಿಗನ್ನಡ ರಾಜ್ಯೋತ್ಸವ ಪ್ರಶಸ್ತಿ, ಇಂಡಿಯನ್ ಎಕ್ಸ್‌ಪ್ರೆಸ್ ಚೇರ್ಮನ್ಸ್ ಅವಾರ್ಡ್, ಟೈಮ್ಸ್ ಗ್ರೂಫ್ ಚೇರ್ಮನ್ಸ್ ಅವಾರ್ಡ್, ವಿವಿಧ ರೋಟರಿ ಸಂಸ್ಥೆಯ ಎಕ್ಸಲೆನ್ಸ್ ಅವಾರ್ಡ್ ಸೇರಿದಂತೆ ಹಲವು ಪ್ರಶಸ್ತಿಗಳು ಲಭಿಸಿವೆ.

300x250 AD

3 ಸಾವಿರಕ್ಕೂ ಹೆಚ್ಚು ವಿಶೇಷ ವರದಿಗಳನ್ನು ಬರೆದಿದ್ದು ಮಹದಾಯಿ ಕುರಿತ ಪುಸ್ತಕ ರಚಿಸಿದ್ದಾರೆ. ಎಂ.ಕೆ. ಹೆಗಡೆ ಅವರ ಪತ್ರಿಕೋದ್ಯಮದ ಸಾಧನೆಯನ್ನು ಪರಿಗಣಿಸಿ ವಿಪ್ರಶ್ರೀ ಪ್ರಶಸ್ತಿ ನೀಡಲಾಗಿದೆ.

Share This
300x250 AD
300x250 AD
300x250 AD
Back to top