ಹೊನ್ನಾವರ: ತಾಲೂಕಿನ ಹಳದಿಪುರ ಅಗ್ರಹಾರದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಬೈಕ್ ಸವಾರ ಮಹೇಶ ಗೌಡ (28) ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಹಳದಿಪುರದಿಂದ ಸಾಲಿಕೇರಿ ಕಡೆಗೆ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದಾಗ ಆಕಳು ಅಡ್ಡ ಬಂದು ತಪ್ಪಿಸಲು ಹೋಗಿ ನಿಂತ ಲಾರಿಗೆ ಹಿಂಬದಿಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೆ ಮೃತಪಟ್ಟಿರುವ ಬಗ್ಗೆ ತಿಳಿದು ಬಂದಿದೆ. ಈ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆದ್ದಾರಿ ಪಕ್ಕ ನಿಂತ ಲಾರಿಗೆ ಬೈಕ್ ಡಿಕ್ಕಿ: ಬೈಕ್ ಸವಾರ ಸಾವು
