Slide
Slide
Slide
previous arrow
next arrow

ಅಧಿಕಾರಿಗಳಿಗೆ ಚುನಾವಣಾ ಕರ್ತವ್ಯ ಹಂಚಿಕೆ: ಡಿಸಿ ಪ್ರಭುಲಿಂಗ ಕವಳಿಕಟ್ಟಿ ಆದೇಶ

300x250 AD

ಕಾರವಾರ: ವಿಧಾನಸಭಾ ಚುನಾವಣಾ ಕೆಲಸ ಕಾರ್ಯಗಳನ್ನು ಸುಗಮ ಮತ್ತು ವ್ಯವಸ್ಥಿತವಾಗಿ ಜರುಗಿಸುವ ಸಂಬoಧ ವಿವಿಧ ಅಧಿಕಾರಿಗಳಿಗೆ ಜವಾಬ್ದಾರಿ ಹಂಚಿಕೆ ಮಾಡಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ.
ಅದರಂತೆ, ಜಿಲ್ಲಾ ಪಂಚಾಯತಿ ಸಿಇಒ ಈಶ್ವರ್ ಕಾಂದೂ ಸ್ವೀಪ್ ಸಮಿತಿಯ ಮುಖ್ಯಸ್ಥರಾಗಿದ್ದು, ಮುಖ್ಯ ಲೆಕ್ಕಾಧಿಕಾರಿಗೆ ಅಭ್ಯರ್ಥಿಗಳ ಚುನಾವಣಾ ವೆಚ್ಚ ಮೇಲ್ವಿಚಾರಣೆ ಜವಾಬ್ದಾರಿ ನೀಡಲಾಗಿದೆ. ಮುಖ್ಯ ಲೆಕ್ಕಾಧಿಕಾರಿ ಜಿಲ್ಲಾ ಪಂಚಾಯತ ಸತೀಶ್ ಪವಾರ್ ಅವರಿಗೆ ಅಭ್ಯರ್ಥಿಗಳ ಚುನಾವಣಾ ವೆಚ್ಚ ಮೇಲ್ವಿಚಾರಣೆ, ಮಾದರಿ ನೀತಿ ಸಂಹಿತಿ ಜಾರಿ, ಮಾಹಿತಿಗಳ ಸಂಗ್ರಹ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ಅನುಮೋದನೆ ಪಡೆದು ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಮಾಹಿತಿ ನೀಡುವ ಜವಾಬ್ದಾರಿ ನೀಡಲಾಗಿದೆ.
ಚುನಾವಣಾ ಶಾಖೆಯ ಗ್ರೇಡ್–2 ತಹಶೀಲ್ದಾರ್ ರೂಪಾ ಸಿ ಅವರಿಗೆಗೆ ಮತಗಟ್ಟೆಯಾದಿ ಮತ್ತು ಮತಗಟ್ಟೆಗಳ ಸೌಲಭ್ಯಗಳ ಮಾಹಿತಿ ಸಂಗ್ರಹಣೆ, ಚುನಾವಣಾ ಶಿರಸ್ತೇದಾರ್ ಎಂ.ಎ ಶೇಖ್ ಅವರಿಗೆ ವಿಧಾನಸಭಾ ಚುನಾವಣೆಗೆ ಸಂಬoಧಿಸಿದ ಲೆಕ್ಕಪತ್ರ ವ್ಯವಹಾರಗಳ ನಿರ್ವಹಣೆ, ಕಾನೂನು ಮತ್ತು ಸುವ್ಯವಸ್ಥೆ ಕುರಿತು ಪತ್ರ ವ್ಯವಹಾರಗಳ ನಿರ್ವಹಣೆ, ಕಾರವಾರ ಆರ್.ಟಿ.ಒ. ರವಿ ಅವರಿಗೆ ಚುನಾವಣಾ ಕಾರ್ಯಕ್ಕೆ ಸಂಬಂಧಿಸಿದಂತೆ ವಾಹನ ಸೌಲಭ್ಯ ನಿರ್ವಹಣೆ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ.
ಕಾರವಾರ ಡಿಡಿಪಿಐ ಈಶ್ವರ್ ನಾಯ್ಕ ಅವರಿಗೆ ಅಂಚೆ ಮತಪತ್ರ ನಿರ್ವಹಣೆ, ಜಿಲ್ಲಾ ಸಂಖ್ಯಾ ಸಂಗ್ರಹಣೆ ಅಧಿಕಾರಿ ಸೋಮಶೇಖರ್ ಮೇಸ್ತಾ ಅವರಿಗೆ ಚುನಾವಣೆ ಸಂಬoಧ ನಡೆಸುವ ಸಭೆಗಳ ನಿರ್ವಹಣೆ, ಸಾಮಾಜಿಕ ಭದ್ರತಾ ಯೋಜನೆ ವಿಭಾಗದ ಸಹಾಯಕ ನಿರ್ದೇಶಕರಿಗೆ ಚುನಾವಣಾ ಸಂಬoಧಿತ ದೂರು ನಿವಾರಣೆ, ರಾಜಕೀಯ ಪಕ್ಷಗಳಿಗೆ ಹಾಗೂ ಸ್ಪರ್ಧಿಸಿದ ಅಭ್ಯರ್ಥಿಗಳಿಗೆ ಸಮಾರಂಭ, ಪ್ರಚಾರಗಳಿಗೆ ಪರವಾನಗಿ ನೀಡುವ ಜವಾಬ್ದಾರಿ ವಹಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸತೀಶ್ ಜಿ ಅವರಿಗೆ ಚುನಾವಣಾ ಸಾಮಗ್ರಿ ಪೂರೈಕೆ, ಡಯಟ್ ಪ್ರಾಚಾರ್ಯ ಎನ್.ಜಿ.ನಾಯಕಗೆ ಮತಗಟ್ಟೆಗಳಿಗೆ ಆಹಾರ ಮತ್ತು ಕುಡಿಯುವ ನೀರು ಪೂರೈಕೆ, ಜೆಜೆಎಂ ಇಇಗೆ ಗ್ರಾಮೀಣ ಭಾಗದ ಮತಗಟ್ಟೆಗಳಿಗೆ, ನಗರ ನೀರು ಸರಬರಾಜು ಮಂಡಳಿ ಇಇಗೆ ನಗರ ಪ್ರದೇಶದ ಮತಗಟ್ಟೆಗಳಿಗೆ ಕುಡಿಯುವ ನೀರು ಪೂರೈಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಿಗೆ ಅಂಗವಿಕಲ ಮತದಾರರಿಗೆ ಸೌಲಭ್ಯ ಕಲ್ಪಿಸುವ ಜವಾಬ್ದಾರಿ ನೀಡಲಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಿಗೆ ಚುನಾವಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಗಳನ್ನ ಪತ್ರಿಕಾ ಪ್ರಕಟಣೆ ಮಾಡುವ ಜವಬ್ದಾರಿ ಸೇರಿದಂತೆ ಹಲವು ಅಧಿಕಾರಿಗಳಿಗೆ ಚುನಾವಣೆ ಕೆಲಸವನ್ನ ಹಂಚಿಕೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top