ಕಾರವಾರ: ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಿಂದ ಜಾರಿಯಾದ ಯೋಜನೆಗಳನ್ನು ಅರ್ಹ ಫಲಾನುಭವಿಗೆ ತಲುಪಿಸಲು ಸಂಬoಧಪಟ್ಟ ಅಧಿಕಾರಿಗಳು ಈ ಕೂಡಲೇ ಕ್ರಮವಹಿಸುವಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ನ್ಯಾಯಾಲಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಸರ್ಕಾರದಿಂದ ಜಾರಿಯಲ್ಲಿರುವ ವಿವಿಧ ಯೋಜನೆಗಳಿಂದ ಹಂಚಿಕೆಯಾದ ಅನುದಾನ ಅಥವಾ ಇತರ ಸೌಲಭ್ಯವನ್ನು ಕೂಡಲೇ ಸಂಬoಧಿಸಿದ ಫಲಾನುಭವಿಗಳಿಗೆ ತಲುಪಿಸುವ ಕ್ರಮವಹಿಸಬೇಕು ಎಂದರು.
ಬಳಿಕ ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಳಿಕಟ್ಟಿ ಮಾತನಾಡಿ, ಸಭೆಯಲ್ಲಿ ಸೇರಿರುವ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ವಿವಿಧ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಈ ಕೂಡಲೆ ತಮ್ಮ ವ್ಯಾಪ್ತಿಗೆ ಒಳಪಡುವ ಸ್ಕೀಮ್‌ಗಳನ್ನು ಪಟ್ಟಿಮಾಡಿ ನೀಡಬೇಕು. ಇದರಲ್ಲಿ ಪ್ರತಿಯೊಂದು ಇಲಾಖೆಯವರು ಭಾಗವಹಿಸವಂತೆ ಸೂಚಿಸಿದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಈಶ್ವರ್ ಖಂಡೂ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ: ವಂದಿತಾ ಶರ್ಮಾ ಸೂಚನೆ
