• Slide
  Slide
  Slide
  previous arrow
  next arrow
 • ಸಿದ್ದಾಪುರ ಶಾಲೆಯ ಅದ್ಧೂರಿ ವಾರ್ಷಿಕೋತ್ಸವ: ಸನ್ಮಾನ, ಬಹುಮಾನ ವಿತರಣೆ

  300x250 AD

  ಸಿದ್ದಾಪುರ: ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಅದ್ಧೂರಿಯಾಗಿ ನಡೆಯಿತು. ಶಾಲೆಯ ಮುಖ್ಯ ಶಿಕ್ಷಕ ಎಂ.ಜಿ.ನಾಯ್ಕ ಮಾತನಾಡಿ, ತಾಲೂಕಿನಲ್ಲಿಯೇ ಮೊದಲ ಸರಕಾರಿ ಪ್ರಾಥಮಿಕ ಶಾಲೆ ಇದಾಗಿದೆ. ಆದರೆ ಇಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇರುವುದು ಬೇಸರದ ಸಂಗತಿ. ಆ ನಿಟ್ಟಿನಲ್ಲಿ ಶಾಲಾ ಪುನಶ್ಚೇತನ ಯೋಜನೆಯ ಅಡಿಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದ್ದೇವೆ. ಈ ವಾರ್ಷಿಕೋತ್ಸವ ಸಹ ಅದರ ಒಂದು ಭಾಗವಾಗಿದೆ. ಸುಮಾರು ಮೂರು ದಶಕಗಳ ನಂತರ ಇಂಥದ್ದೊoದು ಸಂಭ್ರಮದ ಕ್ಷಣಗಳು ಶಾಲೆಯಲ್ಲಿ ಕಾಣುತ್ತಿದ್ದೇವೆ ಎಂದರು.
  ಶಾಲೆಯ ಪುನಶ್ಚೇತನ ಕಾರ್ಯಗಳಿಗೆ ತನು- ಮನ- ಧನಗಳಿಂದ ಸಹಾಯ ಮಾಡಿದ ಗಣ್ಯರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಜನಮನ ಸೆಳೆದವು.
  ನಿವೃತ್ತ ಶಿಕ್ಷಕ ಹಾಗೂ ಸಾಹಿತಿ ಆರ್.ಕೆ.ಹೊನ್ನೆಗುಂಡಿ ಆಗಮಿಸಿದ್ದರು. ಎಸ್‌ಡಿಎಂಸಿ ಅಧ್ಯಕ್ಷ ನಾಗರಾಜ್ ಅಂಬಿಗ ಅಧ್ಯಕ್ಷತೆ ವಹಿಸಿದ್ದರು.

  300x250 AD
  Share This
  300x250 AD
  300x250 AD
  300x250 AD
  Leaderboard Ad
  Back to top