• Slide
    Slide
    Slide
    previous arrow
    next arrow
  • ಕೇಂದ್ರ ಸಚಿವ ಸಂಪುಟ ಸಭೆ: ಹೊಸ ಪ್ರಾಥಮಿಕ ಕೃಷಿ ಸಾಲ ಸೊಸೈಟಿ ಸ್ಥಾಪನೆಗೆ ಅನುಮೋದನೆ

    300x250 AD

    ನವದೆಹಲಿ: ಕೇಂದ್ರ ಸಚಿವ ಸಂಪುಟ ಇಂದು ಸಹಕಾರಿ ಕ್ಷೇತ್ರವನ್ನು ಬಲಪಡಿಸುವ ಸಲುವಾಗಿ ಮುಂದಿನ ಐದು ವರ್ಷಗಳಲ್ಲಿ ಎರಡು ಲಕ್ಷ ಪಂಚಾಯತ್‌ಗಳಲ್ಲಿ ಹೊಸ ಪ್ರಾಥಮಿಕ ಕೃಷಿ ಸಾಲ ಸೊಸೈಟಿ (PACS) ಸ್ಥಾಪನೆಗೆ ಅನುಮೋದನೆ ನೀಡಿದೆ.

    ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೇಂದ್ರ ಸಚಿವ ಅನುರಾಗ್ ಠಾಕೂರ್, ಪ್ರಾಥಮಿಕ ಕೃಷಿ ಸಾಲ ಸೊಸೈಟಿ ಮೂಲಕ 25 ವಿವಿಧ ಸೌಲಭ್ಯಗಳನ್ನು ಒದಗಿಸಲಾಗುವುದು. ಡೈರಿ ಮತ್ತು ಮೀನುಗಾರಿಕೆಯನ್ನು ಸಹ ಕೃಷಿ ಸಹಕಾರಿ ಸಂಘಗಳಿಗೆ ಲಿಂಕ್ ಮಾಡಲಾಗುವುದು ಎಂದುಹೇಳಿದ್ದಾರೆ.

    ಅದೇ ರೀತಿ ದೇಶದಲ್ಲಿ ಸಹಕಾರ ಆಂದೋಲನವನ್ನು ಬಲಪಡಿಸಲು ಮತ್ತು ತಳಮಟ್ಟದವರೆಗೆ ಅದರ ವ್ಯಾಪ್ತಿಯನ್ನು ಆಳಗೊಳಿಸಲು ಕ್ಯಾಬಿನೆಟ್ ಅನುಮೋದನೆ ನೀಡಿದೆ. ಮುಂದಿನ 5 ವರ್ಷಗಳಲ್ಲಿ 2 ಲಕ್ಷ ವಿವಿಧೋದ್ದೇಶ ಪಿಎಸಿಎಸ್/ ಡೈರಿ/ ಮೀನುಗಾರಿಕಾ ಸಹಕಾರ ಸಂಘಗಳನ್ನು ಸ್ಥಾಪಿಸುವ ಗುರಿ ಇದೆ ಎಂದು ಅವರು ಹೇಳಿದ್ದಾರೆ.

    300x250 AD

    ಇನ್ನು 2022-23 ರಿಂದ 2025-26 ರ ಆರ್ಥಿಕ ವರ್ಷಗಳಿಗೆ 4800 ಕೋಟಿ ರೂ.ಗಳ ಹಣಕಾಸು ಹಂಚಿಕೆಯೊಂದಿಗೆ ಕೇಂದ್ರ ಪ್ರಾಯೋಜಿತ ಯೋಜನೆ- ವೈಬ್ರೆಂಟ್ ವಿಲೇಜ್ ಕಾರ್ಯಕ್ರಮಕ್ಕೆ ಅನುಮೋದನೆ ನೀಡಲಾಗಿದೆ. ಇದು ಉತ್ತರದ ಗಡಿಯಲ್ಲಿನ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಮತ್ತು ಜೀವನೋಪಾಯದ ಅವಕಾಶಕ್ಕೆ ಕಾರಣವಾಗುತ್ತದೆ ಎಂದು ಅವರು ಹೇಳಿದ್ದಾರೆ.

    ವೈಬ್ರೆಂಟ್ ವಿಲೇಜ್ ಪ್ರೋಗ್ರಾಂ ಬಗ್ಗೆ ಮಾತನಾಡಿದ ಠಾಕೂರ್, ಇದು ಹಿಮಾಚಲ ಪ್ರದೇಶ, ಉತ್ತರಾಖಂಡ, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶ ಈ ನಾಲ್ಕು ರಾಜ್ಯಗಳಲ್ಲಿ ಮತ್ತು ಉತ್ತರ ಭೂ ಗಡಿಯುದ್ದಕ್ಕೂ ಇರುವ ಜಮ್ಮು ಮತ್ತು ಕಾಶ್ಮೀರದ ಮತ್ತು ಲಡಾಖ್ ನ ಮೂಲಸೌಕರ್ಯ ಅಭಿವೃದ್ಧಿ ಮತ್ತು ಜೀವನೋಪಾಯದ ಅವಕಾಶಗಳಿಗೆ ಕಾರಣವಾಗುತ್ತದೆ.ಈ ಯೋಜನೆಯು ಒಳಗೊಳ್ಳುವಿಕೆಯನ್ನು ವೇಗಗೊಳಿಸಲು ಸಹಾಯ ಮಾಡುತ್ತದೆ. ಉತ್ತರದ ಗಡಿಯಲ್ಲಿನ ಹಳ್ಳಿಗಳ ಬೆಳವಣಿಗೆ ಜನರ ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ ಮತ್ತು ವಲಸೆಯನ್ನು ಹಿಮ್ಮೆಟ್ಟಿಸಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top