ಶಿರಸಿ : ಸಾರಿಗೆ ಇಲಾಖೆಗಳ ಸೇವೆಗಳ ಕುರಿತಂತೆ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸುವ ಸಲುವಾಗಿ ಸಾರಿಗೆ ಅದಾಲತ್ತನ್ನು ಫೆ.17 ರಂದು ಸಂಜೆ3.30 ಗಂಟೆಗೆ ಶಿರಸಿ ನಗರದಲ್ಲಿರುವ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು ಅದಾಲತ್ ನಲ್ಲಿ ಭಾಗವಹಿಸಿ, ತಮ್ಮ ಸಮಸ್ಯೆಗಳ ಹಾಗೂ ಕುಂದುಕೊರತೆಗಳ ಬಗ್ಗೆ ಲಿಖಿತ ದೂರುಗಳನ್ನು ಸಲ್ಲಿಸಬಹುದೆಂದು ಶಿರಸಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಯಲ್ಲಪ್ಪ ನಿಂಗಪ್ಪ ಪಡಸಾಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫೆ.17ಕ್ಕೆ ಸಾರಿಗೆ ಅದಾಲತ್
