ದಾಂಡೇಲಿ: ಗುತ್ತಿಗೆ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರದ ವೆಸ್ಟ್ಕೋಸ್ಟ್ ಕಾಗದ ಕಾರ್ಖಾನೆಯ ಗೇಟ್ ಮುಂಭಾಗದಲ್ಲಿ ಜಂಟಿ ಸಂಧಾನ ಸಮಿತಿಯ ನೇತೃತ್ವದಲ್ಲಿ ಬುಧವಾರ ಜಂಟಿ ಸಂಧಾನ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಜ.31ರಂದು ಜಂಟಿ ಸಂಧಾನ ಸಮಿತಿಯು ಗುತ್ತಿಗೆ ಕಾರ್ಮಿಕರ ಬೇಡಿಕೆಗಳನ್ನು ಈಡೆರಿಸುವಂತೆ ಆಗ್ರಹಿಸಿ ಕಾಗದ ಕಾರ್ಖಾನೆಗೆ ವಿವರವಾದ ಮನವಿಯನ್ನು ನೀಡಿತ್ತು. ಈ ಮನವಿಗೆ ಸಕಾಲಿಕವಾಗಿ ಸ್ಪಂದನೆ ನೀಡದಿರುವುದರಿಂದ ಜಂಟಿ ಸಂಧಾನ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಜಂಟಿ ಸಂಧಾನ ಸಮಿತಿಯ ಚೇರ್‌ಮೆನ್ ಎಸ್.ವಿ.ಸಾವಂತ, ಕಾರ್ಯದರ್ಶಿ ವಿಷ್ಣು ವಾಜ್ವೆೆಯವರ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಕಾರ್ಮಿಕ ಮುಖಂಡರು, ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ.
ಬೇಡಿಕೆಗಳ ಈಡೇರಿಕೆಗೆ ಒತ್ತಾಯ: ಕಾಗದ ಕಾರ್ಖಾನೆ ಕಾರ್ಮಿಕರ ಪ್ರತಿಭಟನೆ
