• Slide
    Slide
    Slide
    previous arrow
    next arrow
  • ರಾಜ್ಯ ಬಜೆಟ್: ಮೀನುಗಾರಿಕಾ ಉತ್ತೇಜನಕ್ಕೆ ನೀಡಿದ ಕೊಡುಗೆಗಳ ಮಾಹಿತಿ ಇಲ್ಲಿದೆ….!!

    300x250 AD

    ಬೆಂಗಳೂರು: ಸಿಎಂ ಬೊಮ್ಮಾಯಿ ರಾಜ್ಯ ಬಜೆಟ್’ನ್ನು ಮಂಡಿಸಿದ್ದು ಮೀನುಗಾರಿಕೆ ಉತ್ತೇಜನಕ್ಕೆ  ಹಲವಾರು ಕ್ರಮಗಳನ್ನು ಘೋಷಿಸಿದ್ದಾರೆ.

    1.ಮೀನುಗಾರರಿಗೆ ನೆರವಾಗಲು 62 FFPO ಗಳ ಸ್ಥಾಪನೆ
    2. 12,175 ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣೆಗೆ ಕ್ರಮ
    3. ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಕೃತಕ ಬಂಡೆ ಸಾಲುಗಳ(Artificial Reet) ಸ್ಥಾಪನೆ
    4. ಉತ್ತಮ ತಳಿಯ ಬಲಿತ ಬಿತ್ತನೆ. ಮೀನು ಮರಿಗಳ ದಾಸ್ತಾನು (Ranching) ಪ್ರೋತ್ಸಾಹಕ್ಕೆ 20 ಕೋಟಿ ರೂ. ಅನುದಾನವನ್ನು ಮೀಸಲು
    5. ಹಾವೇರಿಯಲ್ಲಿ ಹೊಸದಾಗಿ ಮೀನುಮರಿ ಉತ್ಪಾದನಾ ಮತ್ತು ಪಾಲನಾ ಕೇಂದ್ರ ಸ್ಥಾಪನೆ
    6. ಪರಿಸರಸ್ನೇಹಿ ತ್ರಿಚಕ್ರ ಮೀನು ಮಾರಾಟ ವಾಹನ ವಿತರಣೆ
    7. ಯಾಂತ್ರೀಕೃತ ಮೀನುಗಾರಿಕೆ ದೋಣಿಗಳಲ್ಲಿ 17 ಕೋಟಿ ರೂ. ಗಳ ಅನುದಾನದಲ್ಲಿ GPS ಸಂವಹನ ವ್ಯವಸ್ಥೆ ಅಳವಡಿಕೆ
    8. ವಸತಿ ರಹಿತ ಮೀನುಗಾರರಿಗೆ 5,000 ಮನೆಗಳನ್ನು ನಿರ್ಮಾಣ
    9.ಮುಂದಿನ 2 ವರ್ಷಗಳಲ್ಲಿ ಎಲ್ಲಾ ಸೀಮೆಎಣ್ಣೆ ಆಧಾರಿತ ದೋಣಿಗಳಲ್ಲಿ ಪೆಟ್ರೋಲ್/ಡೀಸೆಲ್ ಆಧಾರಿತ ಮೋಟಾರ್ ಇಂಜಿನ್ ಅಳವಡಿಕೆಗೆ ತಲಾ 50 ಸಾವಿರ ರೂ.ನಂತೆ ಸಹಾಯಧನ. ಇದಕ್ಕಾಗಿ ಪ್ರಸಕ್ತ ವರ್ಷದಲ್ಲಿ 40 ಕೋಟಿ ರೂ.ಮೀಸಲು
    10. ಡೀಸೆಲ್‌ನ ಮಿತಿಯ1.5 ಲಕ್ಷ ಕಿಲೋ ಲೀಟರ್‌ಗಳಿಂದ 2 ಲಕ್ಷ ಲೀಟರ್‌ಗಳವರೆಗೆ ಹೆಚ್ಚಳ. ಸರ್ಕಾರದಿಂದ 250 ಕೋಟಿ ರೂ.ಗಳ ನೆರವು
    11.ಸೀಮೆಎಣ್ಣೆ ಸಹಾಯಧನದ ಪ್ರಕ್ರಿಯೆ ಸರಳೀಕರಿಸಿ, ಡಿಬಿಟಿ ಮುಖಾಂತರ ನೇರವಾಗಿ ಮೀನುಗಾರರ ಖಾತೆಗೆ ಜಮಾ
    12. ಆಳಸಮುದ್ರ ಮೀನುಗಾರಿಕೆ ಉತ್ತೇಜನಕ್ಕೆ 100 ಆಳ ಸಮುದ್ರ ಮೀನುಗಾರಿಕಾ ದೋಣಿಗಳಿಗೆ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯೊಂದಿಗೆ ಸಂಯೋಜಿಸಿ ಮತ್ಸ್ಯ ಸಿರಿ ಎಂಬ ವಿಶೇಷ ಯೋಜನೆ ರಾಜ್ಯದಲ್ಲಿ ಜಾರಿ
    13. ಸೀಗಡಿ ಉತ್ಪನ್ನಗಳ ರಫ್ತು ಪ್ರೋತ್ಸಾಹಿಸಲು ಕೇಂದ್ರ ಅಯವ್ಯಯದಲ್ಲಿ ರಫ್ತು ಸುಂಕ ಕಡಿಮೆ

    300x250 AD

    14.ರಾಜ್ಯದ 8 ಮೀನುಗಾರಿಕೆ ಬಂದರುಗಳ ನ್ಯಾವಿಗೇಷನ್ ಚಾನೆಲ್ ಗಳಲ್ಲಿ ಹೂಳೆತ್ತುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಟೆಂಡರ್ ಕರೆ
    15.  ರಾಜ್ಯದಲ್ಲಿ ಮೀನಿನ ರಫ್ತು ಮತ್ತು ಮೌಲ್ಯವರ್ಧನೆಗಾಗಿ ಬೈಂದೂರು ತಾಲ್ಲೂಕಿನ ಕಂಬದಕೋಣೆಯಲ್ಲಿ Seafood Park ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪನೆ

    Share This
    300x250 AD
    300x250 AD
    300x250 AD
    Leaderboard Ad
    Back to top