Slide
Slide
Slide
previous arrow
next arrow

ಡಾ.ಅಜಿತ್ ಹರೀಶಿ ‘ಕನಸಿನ ದನಿ’ ಕವನ ಸಂಕಲನಕ್ಕೆ ಕಸಾಪ ದತ್ತಿ ಪ್ರಶಸ್ತಿ

300x250 AD

ಸಿದ್ದಾಪುರ: 2021 ನೇ ಸಾಲಿನ ಕನ್ನಡ ಸಾಹಿತ್ಯ ಪರಿಷತ್ತು ದತ್ತಿ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದ್ದು, ಡಾ. ಅಜಿತ್ ಹರೀಶಿ ಅವರ ಕನಸಿನ ದನಿ ಕವನ ಸಂಕಲನಕ್ಕೆ ಶ್ರೀಮತಿ ಸುಮನ್ ಸೋಮಶೇಖರ ಸೋಮವಾರಪೇಟೆ ದತ್ತಿ ಪ್ರಶಸ್ತಿ ಸಂದಿದೆ.

ಡಾ.ಅಜಿತ್ ಹರೀಶಿ ಪ್ರಸ್ತುತ ಹರೀಶಿಯಲ್ಲಿ ವೈದ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬಿಳಿಮಲ್ಲಿಗೆಯ ಬಾವುಟ, ಸೂರು ಸೆರೆಹಿಡಿಯದ ಹನಿಗಳು, ಕನಸಿನ ದನಿ ಪ್ರಕಟಿತ ಕವನ ಸಂಕಲನಗಳು; ಪರಿಧಾವಿ, ಕಾಮೋಲ ಮತ್ತು ಮೂಚಿಮ್ಮ ಪ್ರಕಟಿತ ಕಥಾಸಂಕಲನಗಳು. ಆರೋಗ್ಯದ ಅರಿವು (ವೈದ್ಯಕೀಯ ಸಾಹಿತ್ಯ) ಕೃತಿಕರ್ಷ (ವಿಮರ್ಶಾ ಕೃತಿ) ಕಥಾಭರಣ (ಸಂಪಾದಿತ ಕಥಾಸಂಕಲನ) ಪ್ರಕಟಗೊಂಡಿವೆ.

300x250 AD
Share This
300x250 AD
300x250 AD
300x250 AD
Back to top