ಹೊನ್ನಾವರ: ಫೆ.19ರಿಂದ 22ರವರೆಗೆ ಚಾಮುಂಡಿ ವಿಹಾರ ಕ್ರೀಡಾಂಗಣ ಮೈಸೂರಿನಲ್ಲಿ ನಡೆಯುವ ಪ್ರಸಕ್ತ ಸಾಲಿನ ರಾಜ್ಯ ಮಟ್ಟದ 14 ಮತ್ತು 17 ವರ್ಷದೊಳಗಿನ ಶಾಲಾ ಬಾಲಕ ಮತ್ತು ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ತಾಲೂಕಿನ ಜನತಾ ವಿದ್ಯಾಲಯ ಕಡತೋಕದ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ, ಮೈಸೂರು ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮೈಸೂರು ದೈಹಿಕ ಶಿಕ್ಷಣ ವಿಭಾಗದ ಸಹಯೋಗದಲ್ಲಿ ಕ್ರೀಡಾಕೂಟ ನಡೆಯಲಿದೆ. ವಿದ್ಯಾರ್ಥಿಗಳಾದ ಕಾರ್ತಿಕ ಎಚ್.ಗೌಡ 100 ಮೀ. ಓಟ, ಲೋಕೇಶ ಎಸ್.ಗೌಡ 110 ಮೀ ಹರ್ಡಲ್ಸ್, ಧರ್ಮೇಂದ್ರ ಎಸ್.ಗೌಡ ತ್ರಿವಿಧ ಜಿಗಿತ, ದಿವ್ಯಾ ಎಮ್.ಗೌಡ 100 ಮೀ. ಹರ್ಡಲ್ಸ್, ಶೃತಿಕಾ ಡಿ.ಮುಕ್ರಿ 600 ಮೀ. ಓಟದಲ್ಲಿ ಭಾಗವಹಿಸುವ ಅರ್ಹತೆ ಪಡೆದಿದ್ದಾರೆ. ಅತಿ ಹೆಚ್ಚು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾದ ತಾಲೂಕು ಮತ್ತು ಜಿಲ್ಲೆಯ ಪ್ರೌಢಶಾಲೆ ಎಂಬ ಹಿರಿಮೆಗೆ ಪಾತ್ರವಾಗಿದ್ದು ಆಯ್ಕೆಯಾದ ವಿದ್ಯಾರ್ಥಿಗಳು ಸಂಸ್ಥೆಯ, ಶಾಲೆಯ, ಊರಿನ, ತಾಲೂಕು ಹಾಗೂ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿಗಳು, ಟ್ರಸ್ಟಿಗಳು, ಶಾಲಾಭಿವೃಧ್ಧಿ ಸಮಿತಿಯವರು, ಪ್ರಾಚಾರ್ಯರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ದೈಹಿಕ ಶಿಕ್ಷಣಾಧಿಕಾರಿಗಳು, ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಪ್ರಾಚಾರ್ಯರು, ಮುಖ್ಯ ಶಿಕ್ಷಕರು, ಸಿಬ್ಬಂದಿ ವರ್ಗ, ಪೂರ್ವ ವಿದ್ಯಾರ್ಥಿಗಳು, ಹಾಗೂ ಊರ ನಾಗರಿಕರು, ಕ್ರೀಡಾಪಟುಗಳನ್ನು ಅಭಿನಂದಿಸಿ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಶುಭ ಹಾರೈಸಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣ ಆರ್.ಗೌಡ ತರಬೇತಿಯನ್ನು ನೀಡಿದ್ದಾರೆ.