Slide
Slide
Slide
previous arrow
next arrow

ಬಿದ್ರಕಾನ ಪ್ರೌಢಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

300x250 AD

ಸಿದ್ದಾಪುರ: ತಾಲೂಕಿನ ಬಿದ್ರಕಾನಿನಲ್ಲಿರುವ ಎಂ.ಜಿ.ಸಿ.ಎಂ ಪ್ರೌಢಶಾಲೆಯಲ್ಲಿ 75 ನೇ ಸ್ವಾತಂತ್ರ್ಯ ಮಹೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಎಸ್.ಎಸ್. ಪಮ್ಮಾರ  ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟ ಸಮಯದ ಬಲಿದಾನ, ತ್ಯಾಗಗಳನ್ನು ಸ್ಮರಿಸಿದರು. ಮಕ್ಕಳು ಕ್ರೀಡಾ ಮನೋಭಾವ ಹಾಗೂ ಕ್ರೀಡಾಸ್ಫೂರ್ತಿಯನ್ನು ರೂಢಿಸಿಕೊಂಡಾಗ ಉತ್ತಮ ವ್ಯಕ್ತಿತ್ವ ನಿರ್ಮಾಣವಾಗುತ್ತದೆ. ಆಗ ಮನೋಬಲ ಹೆಚ್ಚುತ್ತದೆ ಎಂದು ವಿದ್ಯಾರ್ಥಿಗಳಿಗೆ ಹಿತವಚನ ಹೇಳಿದರು.

ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲ ಶಿಕ್ಷಕರು, ಕಚೇರಿ ಸಿಬ್ಬಂದಿಗಳು, ಶಿಕ್ಷಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

300x250 AD

ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ತಾವಾಗಿಯೇ ಆಸಕ್ತಿಯಿಂದ ಧ್ವಜಾರೋಹಣದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಕೋವಿಡ್ ನಿಯಮ ಪಾಲನೆಯೊಂದಿಗೆ ಕಾರ್ಯಕ್ರಮವನ್ನು ನಡೆಸಲಾಯಿತು.

Share This
300x250 AD
300x250 AD
300x250 AD
Back to top