Slide
Slide
Slide
previous arrow
next arrow

ಕಸಾಪದಿಂದ ಭಟ್ಕಳ ಸಮ್ಮೇಳನಾಧ್ಯಕ್ಷರಿಗೆ ಆಮಂತ್ರಣ

300x250 AD

ಭಟ್ಕಳ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 10ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿರುವ ಸಾಹಿತಿ ಮಾನಾಸುತ ಶಂಭು ಹೆಗಡೆ ಅವರನ್ನು ಅವರ ನಿವಾಸಕ್ಕೆ ತೆರಳಿ ಸಮ್ಮೇಳನಕ್ಕೆ ಆಮಂತ್ರಣ ನೀಡಿ ಆಹ್ವಾನಿಸಲಾಯಿತು.
ಈ ಸಂದರ್ಭದಲ್ಲಿ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಮಾತನಾಡಿ, ಮಾನಾಸುತ ಶಂಭು ಹೆಗಡೆ ಅವರ ಸಾಹಿತ್ಯ ಸೇವೆಯನ್ನು ಪರಿಗಣಿಸಿ ಸಮ್ಮೇಳನಾಧ್ಯಕ್ಷತೆಯ ಗೌರವ ನೀಡಲಾಗಿದೆ. ಪರಿಷತ್ತು ನೀಡಿರುವ ಗೌರವವನ್ನು ಸ್ವೀಕರಿಸಿ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ವಹಿಸಬೇಕೆಂದು ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದರಲ್ಲದೇ, ಮಾನಾಸುತ ಅವರ ಧರ್ಮಪತ್ನಿ ವನಿತಾ ಹೆಗಡೆ ಅವರನ್ನೂ ಆಮಂತ್ರಿಸಲಾಯಿತು.
ಈ ಸಂದರ್ಭದಲ್ಲಿ ಸಮ್ಮೇಳನದ ಸ್ವಾಗತ ಸಮಿತಿಯ ಉಪಾಧ್ಯಕ್ಷ ಎಸ.ಎಸ್.ಕಾಮತ್, ಕಸಾಪ ಗೌರವ ಕೋಶಾಧ್ಯಕ್ಷ ಶ್ರಿಧರ ಶೇಟ್, ಕಾರ್ಯಕಾರಿ ಸಮಿತಿ ಸದಸ್ಯರಾದ ಎಂ.ಪಿ.ಭಂಡಾರಿ, ಪೂರ್ಣಿಮಾ ಕರ್ಕಿಕರ್, ನೇತ್ರಾವತಿ ಆಚಾರ್ಯ ಮುಂತಾದವರು ಇದ್ದರು.

300x250 AD
Share This
300x250 AD
300x250 AD
300x250 AD
Back to top