Slide
Slide
Slide
previous arrow
next arrow

ಮೊಬೈಲ್, ಹೈನುಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

300x250 AD

ಕಾರವಾರ: ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯು 30 ದಿನಗಳ ಕಾಲ ಮೊಬೈಲ್ ಫೋನ್ ದುರಸ್ತಿ, 10 ದಿನಗಳ ಕಾಲ ಕುರಿ ಸಾಕಾಣಿಕೆ ಹಾಗೂ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ.
ಆಸಕ್ತ 18ರಿಂದ 45 ವರ್ಷದೊಳಗಿನ ಯುವಕ, ಯುವತಿಯರು ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ,ವಿರ್ದ್ಯಾರ್ಹತೆ, ಮುಂತಾದವುಗಳ ವಿವರಗಳೊಂದಿಗೆ ಫೆ.28ರೊಳಗೆ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಗೆ ಫೋನ್ ಮೂಲಕ ವಿವರ ನೀಡಿ ತರಬೇತಿಗೆ ನೋಂದಾಯಿಸಿಕೊಳ್ಳಬಹುದು. ತರಬೇತಿಯು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿದೆ. ತರಬೇತಿಯೊಂದಿಗೆ ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ, ಬ್ಯಾಂಕಿಂಗ್, ಸಾರಕಾರಿ ಯೋಜನೆಗಳು ಮತ್ತು ಯೋಜನಾ ವರದಿಗಳ ತಯಾರಿಕೆಗಳ ಬಗೆಗೆ ಮಾಹಿತಿ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9482188780, 9483485489, 9632225123 ಗೆ ಸಂಪರ್ಕಿಸಿ ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top