Slide
Slide
Slide
previous arrow
next arrow

ರಸ್ತೆ ಬದಿಯಲ್ಲಿ ವಾಹನ ನಿಲುಗಡೆಗೆ ಅವಕಾಶ ನೀಡದಂತೆ ಮನವಿ

300x250 AD

ದಾಂಡೇಲಿ: ನಗರದ ಪ್ರಮುಖ ರಸ್ತೆಯಾಗಿರುವ ಬರ್ಚಿ ರಸ್ತೆಯಿಂದ ಗಣೇಶನಗರ, ವನಶ್ರೀನಗರ, ಸುಭಾಸನಗರಕ್ಕೆ ಹೋಗುವ ಬಸವೇಶ್ವರ ನಗರ ರಸ್ತೆ ಮುಖ್ಯ ರಸ್ತೆಯಾಗಿದ್ದು, ಈ ರಸ್ತೆಯಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಅಗತ್ಯ ಕ್ರಮವನ್ನು ಕೈಗೊಳ್ಳುವಂತೆ ನಗರಸಭಾ ಸದಸ್ಯ ನಂದೀಶ್ ಮುಂಗರವಾಡಿ ಮನವಿ ಮಾಡಿದ್ದಾರೆ.
ಇಲ್ಲಿ ಹೆಚ್ಚಿನ ವಾಹನಗಳ ಓಡಾಟದ ಜೊತೆಗೆ ಜನಸಂಚಾರವೂ ಅತ್ಯಧಿಕವಾಗಿರುತ್ತದೆ. ಶಾಲೆ, ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು, ಇಂಡಸ್ಟ್ರಿಯಲ್ ಪ್ರದೇಶಕ್ಕೆ ಕೆಲಸಕ್ಕೆ ಹೋಗುವ ಕಾರ್ಮಿಕರು ಇದೇ ರಸ್ತೆಯನ್ನು ಅವಲಂಬಿಸಿರುತ್ತಾರೆ. ಆದರೆ ಈ ರಸ್ತೆ ಹದಗೆಟ್ಟು ವರ್ಷ ಮೂರು ಸಂದರೂ ಇನ್ನೂ ದುರಸ್ತಿ ಭಾಗ್ಯ ಕಂಡಿಲ್ಲ. ಇನ್ನೂ ರಸ್ತೆ ಬದಿಯಲ್ಲಿ ಯುಜಿಡಿ ಪೈಪ್ಲೈನ್ ಕಾಮಗಾರಿಗಾಗಿ ರಸ್ತೆ ಅಗೆದು, ಪೈಪ್ಲೈನ್ ಅಳವಡಿಸಿ, ಮುಚ್ಚಲಾಗಿದೆ. ಆದರೆ ಬಸ್ ಮೊದಲಾದ ಘನ ವಾಹನಗಳಿಗೆ ಎದುರುಗಡೆಯಿಂದ ಬರುವ ವಾಹನಗಳಿಗೆ ಸ್ಥಳ ನೀಡಲು ಕಷ್ಟಸಾಧ್ಯವಾಗುತ್ತದೆ. ಇವೆಲ್ಲವುಗಳ ಜೊತೆಗೆ ಈ ರಸ್ತೆಯ ಆರಂಭದಿಂದ ಕೊನೆಯವರೆಗೆ ಅಲ್ಲಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಲಾಗುತ್ತಿರುವುದರಿಂದ ಇಲ್ಲಿ ಸುಗಮ ಸಂಚಾರಕ್ಕೆ ಅಡಚಣೆಯಾಗುತ್ತದೆ ಎಂದಿದ್ದಾರೆ.
ವಿದ್ಯಾರ್ಥಿಗಳು ಸೈಕಲ್ ಮೂಲಕ ಶಾಲೆಗೆ ಹೋಗುತ್ತಿದ್ದು, ಪಾಲಕರು ಜೀವ ಭಯದಲ್ಲೆ ಮಕ್ಕಳನ್ನು ಶಾಲೆಗೆ ಕಳುಹಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಈ ನಿಟ್ಟಿನಲ್ಲಿ ರಸ್ತೆ ಬದಿಯಲ್ಲಿ ಪಾರ್ಕಿಂಗ್ ಮಾಡುವ ವಾಹನಗಳವರು ರಸ್ತೆಗೆ ತಾಗಿ ಕೊಂಡಿರುವ ಅಡ್ಡ ರಸ್ತೆಗಳ ಬದಿಯಲ್ಲಿ ತಮ್ಮ ತಮ್ಮ ವಾಹನಗಳನ್ನು ಪಾರ್ಕಿಂಗ್ ಮಾಡಿ ಮುಂದಾಗಬಹುದಾದ ಅನಾಹುತವನ್ನು ತಪ್ಪಿಸುವಂತೆ ಮತ್ತು ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಕ್ರಮವನ್ನು ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

300x250 AD
Share This
300x250 AD
300x250 AD
300x250 AD
Back to top