ಕುಮಟಾ: ತಾಲೂಕಿನ ಮಿರ್ಜಾನ್ ಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ ಸರಸ್ವತಿ ಪೂಜೆ ಮತ್ತು ವಿಜ್ಞಾನ ವಸ್ತುಪ್ರದರ್ಶನ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ನೆರವೇರಿತು.
ಶ್ರೀಗಳು ವಿದ್ಯಾ ದೇವಿಗೆ ಪೂಜೆ ಸಲ್ಲಿಸಿದ ಬಳಿಕ ವಿದ್ಯಾರ್ಥಿಗಳು ಪ್ರದರ್ಶನಕ್ಕೆ ಇರಿಸಿದ್ದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ, ವಿಜ್ಞಾನ ಮಾದರಿಗಳನ್ನು ವೀಕ್ಷಿಸಿ, ಮಕ್ಕಳಿಂದ ಆಯಾ ಮಾದರಿಗಳ ಉಪಯೋಗ ಮತ್ತು ಪ್ರಯೋಜನದ ಬಗ್ಗೆ ಮಾಹಿತಿ ಪಡೆದರು.
ಬಳಿಕ ಆಶೀರ್ವಚನ ನೀಡಿದ ಶ್ರೀಗಳು, ವಿದ್ಯಾರ್ಥಿಗಳು ಅಧ್ಯಯನದ ಜೊತೆಗೆ ವಿದ್ಯಾ ದೇವಿಯನ್ನು ಸ್ಮರಿಸುವ ಮುಖೇನ ಆಕೆಯ ಕೃಪೆಗೆ ಪಾತ್ರರಾಗಬೇಕು. ಯಾರೂ ಶ್ರದ್ಧೆಯಿಂದ ಅಧ್ಯಯನಶೀಲರಾಗುತ್ತಾರೋ ಅಂಥವರು ಮಾತ್ರ ಶೈಕ್ಷಣಿಕ ಪ್ರಗತಿ ಹೊಂದಲು ಸಾಧ್ಯ. ಎಲ್ಲ ವಿದ್ಯಾರ್ಥಿಗಳು ಆ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಶ್ರೀಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ, ಪ್ರಾಂಶುಪಾಲರು, ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.