ಯಲ್ಲಾಪುರ: ವೃತ್ತಿ ಕಲಾವಿದರಿಂದಾಗಿ ಕಲೆ, ಸಂಸ್ಕೃತಿ ಉಳಿದುಕೊಂಡಿದೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.
ಪಟ್ಟಣದ ಶಿರಸಿ ರಸ್ತೆಯಲ್ಲಿರುವ ಮದ್ಗುಣಿ ಫ್ಲಾಟ್‌ನಲ್ಲಿ ಶ್ರೀಗುರು ಸಿದ್ಧಲಿಂಗೇಶ್ವರ ನಾಟ್ಯ ಸಂಘ ಮಂಡಲಗಿರಿ ಆಯೋಜಿಸಿದ್ದ ‘ಎಲ್ಲಿ ಅದಿ ಮಲ್ಯಾ’ ನಾಟಕದ ಪ್ರಥಮ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.
ನಾಟಕ ಕಂಪನಿಗಳ ಕಲಾವಿದರ ಬದುಕು ಕಷ್ಟಕರವಾಗಿದೆ. ಇಂತಹ ದುಸ್ತರ ಪರಿಸ್ಥಿತಿಯಲ್ಲೂ ನಮಗೆ ಕಲೆಯನ್ನು ಉಣಬಡಿಸುವ ಕಾರ್ಯ ಮಾಡುತ್ತಿದ್ದಾರೆ. ಕಲೆಯನ್ನು ಪ್ರೋತ್ಸಾಹಿಸುವ ಮೂಲಕ ಅವರಿಗೆ ನೆರವಾಗುವ ಕಾರ್ಯ ನಾವೆಲ್ಲರೂ ಮಾಡಬೇಕಿದೆ ಎಂದರು.
ಸಚಿವ ಶಿವರಾಮ ಹೆಬ್ಬಾರ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ನಾಗರಾಜ ಮದ್ಗುಣಿ ಸ್ವಾಗತಿಸಿದರು, ಎಸ್.ಎಲ್.ಜಾಲಿಸತ್ಗಿ ವಂದಿಸಿದರು. ಸುಧಾಕರ್ ನಾಯಕ ನಿರೂಪಿಸಿದರು. ಸ್ಥಳದ ಮಾಲಕರಾದ ವೇಣುಗೋಪಾಲ ಮದ್ಗುಣಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಪ್ರಮುಖರಾದ ವಿಜಯ್ ಮಿರಾಶಿ, ಪ್ರಕಾಶ ಹೆಗಡೆ, ಬೀರಣ್ಣ ನಾಯಕ ಮೊಗಟಾ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಂಗನ ಬಸಯ್ಯ, ಹೆಸ್ಕಾಂ ಎಇಇ ವಿನಾಯಕ ಪೇಟ್ಕರ್, ನಾಟ್ಯ ಸಂಘದ ಮಾಲಕ ಕುಮಾರ ಅರಳಿಹಳ್ಳಿ ವೇದಿಕೆಯಲ್ಲಿದ್ದರು.