ಗೋಕರ್ಣ: ಅನುದಾನಿತ ನೌಕರರ ಪಿಂಚಣಿ ಹೋರಾಟಕ್ಕೆ ಬೆಂಗಳೂರಿಗೆ ಆಗಮಿಸಿ ಅಹೋರಾತ್ರಿ ಹೋರಾಟದಲ್ಲಿ ಪಾಲ್ಗೊಂಡು ಅಲ್ಲಿಯೇ ಪ್ರಾಣತ್ಯಾಗ ಮಾಡಿದ ಶಂಕ್ರಪ್ಪ ಭೋರೆಡ್ಡಿ ಆತ್ಮಕ್ಕೆ ಚಿರಶಾಂತಿ ಕೋರಿ ಪ್ರಾರ್ಥನೆ ವೇಳೆಯಲ್ಲಿ ಸಾಮೂಹಿಕವಾಗಿ ಮೌನಾಚರಣೆ ಮಾಡಲಾಯಿತು.
ಮುಖ್ಯಾಧ್ಯಾಪಕ ರೋಹಿದಾಸ ಎಸ್.ಗಾಂವಕರ ಈ ವೇಳೆ ಮಾತನಾಡಿ, ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬದವರಿಗೆ ದುಃಖ ಸಹಿಸುವ ಶಕ್ತಿ ದೇವರು ದಯಪಾಲಿಸಲಿ. ಪಿಂಚಣಿ ಬೇಗ ಸಿಗುವಂತಾಗಲಿ ಎಂದರು.
ಶಿಕ್ಷಕರು ಕಪ್ಪುಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗಿದ್ದರು. ಹೈಸ್ಕೂಲಿನ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
ಅಗಲಿದ ಶಂಕ್ರಪ್ಪ ಭೋರೆಡ್ಡಿ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ
