ವಿಟ್ಲ: ಫ್ರೀಡಂ ಎಜ್ಯುಕೇಷನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ಒಡೆತನಕ್ಕೆ ಸೇರಿದ ಫ್ರೀಡಂ ಕಮ್ಯುನಿಟಿ ಹಾಲ್ ಅನ್ನು ಎನ್‌ಐಎ ಕಾನೂನುಬದ್ಧವಾಗಿ ವಶಕ್ಕೆ ಪಡೆದುಕೊಂಡಿದೆ.
1967ರ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ ಕಲಂ 25ರ ಅನ್ವಯ ಪಿಎಫ್‌ಐ ಸದಸ್ಯರಿಗೆ ಶಸ್ತ್ರಾಸ್ತ್ರ ತರಬೇತಿ ನೀಡುತ್ತಿದೆ ಎಂದು ಆರೋಪಿಸಿ ಕೃತ್ಯಕ್ಕೆ ಬಳಸಿದ ಹಾಲ್ ಸಹಿತ ಜಾಗವನ್ನು ಎನ್‌ಐಎ ತನ್ನ ಸ್ವಾಧೀನಕ್ಕೆ ಪಡೆದುಕೊಂಡಿದೆ. ಜಮೀನನ್ನು ಬೇರೆಯವರಿಗೆ ಮಾರಾಟ ಮಾಡುವ, ವರ್ಗಾವಣೆ ಮಾಡುವ, ಲೀಸ್ ಮಾಡುವ ಹಾಗೂ ಇನ್ಯಾವುದೇ ರೀತಿಯ ಬದಲಾವಣೆ ಮಾಡುವುದನ್ನು ನಿರ್ಬಂಧಿಸಲಾಗಿದೆ.
ಬೆಂಗಳೂರು ವಿಭಾಗ ಎನ್.ಐ.ಎ ಮುಖ್ಯ ತನಿಖಾಧಿಕಾರಿ ಷಣ್ಮುಗಂ ಎಂ. ಅವರು ಫ್ರೀಡಂ ಎಜ್ಯುಕೇಷನ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ಕಾರ್ಯದರ್ಶಿ ಅಬೂಬಕರ್ ಸಿದ್ದೀಕ್ ಅವರಿಗೆ ನೋಟೀಸ್ ಜಾರಿಗೊಳಿಸಿ ಆದೇಶಿಸಿದ್ದಾರೆ.