• Slide
    Slide
    Slide
    previous arrow
    next arrow
  • ಮಾ.1ರಿಂದ ಸರ್ಕಾರಿ ಕೆಲಸಕ್ಕೆ ನೌಕರರ ಗೈರು: ಮೋಹನ ನಾಯ್ಕ

    300x250 AD

    ಭಟ್ಕಳ: ರಾಜ್ಯ ಸರಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿಯ ಯೋಜನೆಯನ್ನು ಜಾರಿಗೊಳಿಸುವಂತೆ ಸರಕಾರಕ್ಕೆ ಆಗ್ರಹಿಸಿ ಮಾ.1ರಂದು ರಾಜ್ಯದ ಸಮಸ್ತ ಸರಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ಹೂಡಲಿದ್ದೇವೆ ಎಂದು ಸರಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಮೋಹನ ನಾಯ್ಕ ಹೇಳಿದರು.
    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.21ರಂದು ಜರುಗಿದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲೆಯ ಹಾಗೂ ತಾಲೂಕು ಯೋಜನಾ ಶಾಖೆಗಳ ಚುನಾಯಿತ ಪ್ರತಿನಿಧಿಗಳ ಹಾಗೂ ವೃಂದ ಸಂಘಗಳ ಅಧ್ಯಕ್ಷರು ಪದಾಧಿಕಾರಿಗಳ ತುರ್ತು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ರಾಜ್ಯದ 2023-24ನೇ ಸಾಲಿನ ಆಯವ್ಯಯದಲ್ಲಿ ಸರಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪವನ್ನು ಸರಕಾರ ಮಾಡದಿರುವುದು ಸಹಜವಾಗಿಯೇ ನೌಕರರಲ್ಲಿ ನಿರಾಸೆ ಮೂಡಿಸಿದೆ. ರಾಜ್ಯ ಸರಕಾರದ ಅಧಿಕಾರಿ ನೌಕರರು ಹಾಗೂ ಸರಕಾರದ ಅಧೀನಕ್ಕೊಳಪಡುವ ನೌಕರರು ಕಾಲಕಾಲಕ್ಕೆ ವೇತನ ಹಾಗೂ ಭತ್ಯೆಯನ್ನು ಪರಿಷ್ಕರಣೆಯೊಂದಿಗೆ ಪಡೆಯುವುದು ಅವರ ಮೂಲಭೂತ, ನ್ಯಾಯಸಮ್ಮತ ಹಕ್ಕಾಗಿದ್ದು, ಪ್ರಸ್ತುತ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ ನೌಕರರು ಕುಟುಂಬ ನಿರ್ವಹಣೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವುದರಿಂದ ನೌಕರರ ವೇತನ ಪರಿಷ್ಕರಣೆ ಮಾಡಿ ಆರ್ಥಿಕ ವ್ಯತ್ಯಾಸಗಳನ್ನು ಸರಿಪಡಿಸುವುದು ಸರಕಾರದ ಜವಾಬ್ದಾರಿಯಾಗಿದೆ ಎಂದಿದ್ದಾರೆ.
    ಸರಕಾರ ನಿರ್ಲಕ್ಷ್ಯ ವಹಿಸಿರುವುದಕ್ಕೆ ಸಭೆಯು ಒಕ್ಕೊರಲಿನಿಂದ ಅಸಮ್ಮತಿ ವ್ಯಕ್ತಪಡಿಸಿ ಬೇಡಿಕೆಗಳ ಈಡೇರಿಕೆಗಾಗಿ ಸರಕಾರವನ್ನು ಒತ್ತಾಯಿಸಿ ಸರಕಾರಿ ನೌಕರರು ಕರ್ತವವ್ಯಕ್ಕೆ ಗೈರು ಹಾಜರಾಗುವದರ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲು ನಿರ್ಣಯ ಕೈಗೊಂಡಿದೆ. ರಾಜ್ಯ ಸರಕಾರಿ ನೌಕರರು ಹಾಗೂ ಸರಕಾರದ ಅಧೀನಕ್ಕೊಳಪಡುವ ನೌಕರರಿಗೆ 2022ರ ಜು.01ರಿಂದ ಪರಿಷ್ಕೃತ ವೇತನ, ಭತ್ಯೆಗಳಿಗೆ ಅರ್ಹರಾಗಿದ್ದು, 6ನೇ ವೇತನ ಆಯೋಗದ ಮಾದರಿಯಂತೆ 7ನೇ ವೇತನ ಆಯೋಗದಿಂದ ಶೀಘ್ರವಾಗಿ ಮಧ್ಯಂತರ ವರದಿಯನ್ನು ಪಡೆದು ಚುನಾವಣೆ ನೀತಿ ಸಂಹಿತೆ ಜಾರಿಗೆ ಬರುವ ಮೊದಲು ಶೇ 40 ಫಿಟ್‌ಮೆಂಟ್ ಸೌಲಭ್ಯವನ್ನು 2022ರ ಜು.01ಕ್ಕೆ ಜಾರಿಗೆ ಬರುವಂತೆ ಸರಕಾರಿ ಆದೇಶ ಹೊರಡಿಸುವುದು ನಮ್ಮ ಬೇಡಿಕೆಯಾಗಿದೆ ಎಂದು ತಿಳಿಸಿದರು.
    ರಾಜ್ಯದ ಎನ್‌ಪಿಎಸ್ ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾ ಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್‌ಪಿಎಸ್ ನೌಕರರನ್ನು ಓಪಿಎಸ್ ವ್ಯಾಪ್ತಿಗೆ ತರುವುದು ಸರಕಾರದ ಜವಾಬ್ದಾರಿಯಗಿರುತ್ತದೆ. ಈಗಾಗಲೇ ಪಂಜಾಬ್, ರಾಜಸ್ಥಾನ, ಚತ್ತೀಸಘಡ್, ಜಾರ್ಖಂಡ್, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದ್ದು, ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಸಹ ಎನ್‌ಪಿಎಸ್ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ ಎಂದರು.
    ಈ ಸಂದರ್ಭದಲ್ಲಿ ಸರಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಗಣೇಶ ಹೆಗಡೆ, ರಾಜ್ಯ ಪರಿಷತ್ ಸದಸ್ಯರಾದ ಪ್ರಕಾಶ ಶಿರಾಲಿ, ಮಂಜುನಾಥ ನಾಯ್ಕ, ಶಿಕ್ಷಕರ ಸಂಘದ ಆದ್ಯಕ್ಷ ಉಲ್ಲಾಸ ನಾಯ್ಕ, ಕೆ.ಆರ್.ನಾಯ್ಕ ಸೇರಿದಂತೆ ಸರಕಾರ ನೌಕರರ ಸಂಘದ ಸದಸ್ಯರು ಹಾಜರಿದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top