ಕಾರವಾರ: ಸಿದ್ದಾಪುರದಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆ ಅರ್ಜಿ ಆಹ್ವಾನಿಸಿದೆ.
ಅಂಗನವಾಡಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಕನಿಷ್ಟ 19, ಗರಿಷ್ಟ 35ರ ವಯೋಮಾನದವರಾಗಿರಬೇಕು, ಕನಿಷ್ಟ ಪಿಯುಸಿ ತೇರ್ಗಡೆ ಹೊಂದಿರಬೇಕು. ಎಸ್‌ಎಸ್‌ಎಲ್‌ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯಲ್ಲಿ ಅಧ್ಯಯನ ಮಾಡಿರಬೇಕು, ಕಾರ್ಯಕರ್ತೆಯರ ನೇಮಕಾತಿ ಸಂದರ್ಭದಲ್ಲಿ ಸರ್ಕಾರದ ಅಂಗೀಕೃತ ಸಂಸ್ಥೆಗಳಿಂದ ಡಿಎಸ್‌ಇಆರ್‌ಟಿಯಿಂದ ಇಸಿಜಸಿಇ ಡಿಪ್ಲೋಮಾ ಕೋರ್ಸ್, ಜೆಓಸಿ ಕೋರ್ಸ್, ಎನ್‌ಟಿಟಿ ಕೋರ್ಸ ಗಳನ್ನು ಹಾಗೂ ಡಿಪ್ಲೋಮಾ ನ್ಯೂಟ್ರಿಷಿಯನ್, ಹೋಂ ಸೈನ್ಸ್ ಸರ್ಟಿಫಿಕೇಟ್ ಕೋರ್ಸ್, ಒಂದು ವಷÀðದ ನರ್ಸರಿ ಅಥವಾ ಪೂರ್ವ ಪ್ರಾಥಮಿಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿದವರಿಗೆ ಮೊದಲ ಆದ್ಯತೆ ನೀಡುವುದು ಮತ್ತು ಬೋನಸ್ 5 ಅಂಕಳನ್ನು ನೀಡಲಾಗುವದು.
ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಅಂಗನವಾಡಿ ಕೇಂದ್ರದ ಕಂದಾಯ ಗ್ರಾಮ/ ಕಂದಾಯ ವಾರ್ಡ್ನಲ್ಲಿ ವಾಸ್ತವ್ಯ ಹೊಂದಿರಬೇಕು. ಅಂಗಗುಡಿ ಕಾರ್ಯಕರ್ತೆ ಹುದ್ದೆಗೆ ಮಹಿಳೆಯರು ಹಾಗೂ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳೆಯರು ಅರ್ಜಿ ಸಲ್ಲಿಸಬಹುದು. ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು. ಎಸ್‌ಎಸ್‌ಎಲ್‌ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಓದಿರಬೇಕು. ಅಭ್ಯರ್ಥಿಯ ವಯಸ್ಸು ಕನಿಷ್ಟ 19,ಗರಿಷ್ಠ 35 ರ ವಯೋಮಾನದವರಾಗಿರಬೇಕು.
ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಅಂಗನವಾಡಿ ಕೇಂದ್ರದ ಕಂದಾಯ ಗ್ರಾಮ/ ಕಂದಾಯ ವಾರ್ಡ್ನಲ್ಲಿ ವಾಸ್ತವ್ಯ ಹೊಂದಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರು ಅರ್ಜಿ ಸಲ್ಲಿಸಬಹುದು. ಆಸಕ್ತರು ಮಾ.18ರ ಸಂಜೆ 5.30ರೊಳಗೆ ಲಕೋಟೆಯ ಮೇಲೆ ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ/ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಎಂದು ನಮೂದಿಸಿ ಕಛೇರಿ ವೇಳೆಯಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಸಿದ್ದಾಪುರ ಇಲ್ಲಿಗೆ ಸಲ್ಲಿಸಬೇಕು. ನಿಗದಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ನೇಮಕಾತಿಗಾಗಿ ಪರಿಗಣಿಸಲಾಗುವದಿಲ್ಲ. ಹೆಚ್ಚಿನ ಮಾಹಿತಿಗಾಗಿ ಸಿದ್ದಾಪುರ ಶಿಶು ಅಭಿವೃದ್ಧಿ ಯೋಜನಾ ಕಚೇರಿಗೆ ಅಥವಾ ದೂರವಾಣಿ ಸಂಖ್ಯೆ: 0839- 231 402ಗೆ ಸಂಪರ್ಕಿಸಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ