• Slide
  Slide
  Slide
  previous arrow
  next arrow
 • ಮಾ.1ಕ್ಕೆ ಭಟ್ಕಳ ತಾಲೂಕು 10ನೇ ಸಾಹಿತ್ಯ ಸಮ್ಮೇಳನ

  300x250 AD

  ಭಟ್ಕಳ: ತಾಲೂಕಾ 10ನೇ ಸಾಹಿತ್ಯ ಸಮ್ಮೇಲನವು ಇಲ್ಲಿನ ಮುರ್ಡೇಶ್ವರದ ಡಾ.ಆರ್.ಎನ್.ಶೆಟ್ಟಿ ಸಭಾಭವನದ ಡಾ.ಆರ್.ಎನ್.ಶೆಟ್ಟಿ ವೇದಿಕೆಯಲ್ಲಿ ನಡೆಯಲಿದೆ. ಮಾನಾಸುತ ಶಂಭು ಹೆಗಡೆ ಈ ಬಾರಿಯ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದು ಕಸಾಪ ತಾಲೂಕು ಅಧ್ಯಕ್ಷ ಗಂಗಾಧರ ನಾಯ್ಕ ಹೇಳಿದರು.
  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನದ ದಿನ ಮುಂಜಾನೆ 8 ಗಂಟೆಗೆ ರಾಷ್ಟ್ರಧ್ವಜಾರೋಹಣವನ್ನು ಗ್ರಾ.ಪಂ. ಮಾವಳ್ಳಿ 1 ಅಧ್ಯಕ್ಷರಾದ ಮಾದೇವಿ ಮೊಗೇರ್, ಪರಿಷತ್ತಿನ ಧ್ವಜಾರೋಹಣವನ್ನು ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್.ವಾಸರೆ, ನಾಡ ದ್ವಜಾರೋಹಣವನ್ನು ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ನೆರವೇರಿಸಲಿದ್ದಾರೆ. ಈ ವೇಳೆ ಅಧ್ಯಕ್ಷರು ಮಾವಳ್ಳಿ 2 ರಾಘವೇಂದ್ರ ನಾಯ್ಕ, ಉಪಾಧ್ಯಕ್ಷೆ ನಾಗರತ್ನ ಮೊಗೇರ, ಗ್ರಾ.ಪಂ.ಮಾವಳ್ಳಿ 1ರ ಉಪಾಧ್ಯಕ್ಷೆ ಸಬೀನಾ ಅಬ್ದುಲ ಸತ್ತಾರ ಸಯ್ಯದ ಉಪಸ್ಥಿತರಿರಲಿದ್ದಾರೆ ಎಂದರು.
  ನಂತರ 8.30ಕ್ಕೆ ಜನಪದ ಕಲಾ ತಂಡಗಳು, ವಿವಿಧ ಇಲಾಖೆಗಳ ಸ್ತಬ್ದಚಿತ್ರಗಳೊಂದಿಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆಯು ಮುರ್ಡೇಶ್ವರದ ಜನತಾ ವಿದ್ಯಾಲಯದಿಂದ ಹೊರಟು ಆರ್.ಎನ್.ಎಸ್. ಸಭಾಂಗಣವನ್ನು ತಲುಪಲಿದೆ. ಮೆರವಣಿಗೆಗೆ ಪೋಲೀಸ ಉಪಾಧೀಕ್ಷಕ ಶ್ರೀಕಾಂತ ಕೆ. ಚಾಲನೆ ನೀಡಲಿದ್ದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಟಿ.ಬೋರಯ್ಯ, ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ  ಮಂಜುನಾಥ ಶಂಕ್ರಳ್ಳಿ,  ವಲಯ ಅರಣ್ಯಾಧಿಕಾರಿ ಶರತ್ ಶೆಟ್ಟಿ, ಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷ ರಮೇಶ ನಾಯ್ಕ ಉಪಸ್ಥಿತರಿರಲಿದ್ದಾರೆ. 10ಗಂಠೆಗೆ ಸಮ್ಮೇಳನದ  ಉದ್ಘಾಟನೆಯನ್ನು ಹಿರಿಯ ಸಾಹಿತಿ ಡಾ.ಶ್ರೀಪಾದ ಶೆಟ್ಟಿ ನೆರವೇರಿಸಲಿದ್ದು, ಶಾಸಕ ಸುನಿಲ ನಾಯ್ಕ ಪುಸ್ತಕಗಳನ್ನು ಬಿಡುಗಡೆ ಮಾಡಲಿದ್ದಾರೆ. ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್.ವಾಸರೆ ಆಶಯನುಡಿಗಳನ್ನಾಡಲಿದ್ದಾರೆ ಎಂದರು.
  ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ  ಗೋವಿಂದ ನಾಯ್ಕ ಶ್ರೀಪಾದ ಕಾಮತ್ ದ್ವಾರವನ್ನು,  ಕಾರ್ಮಿಕ ಇಲಾಖೆಯ ರಾಜ್ಯಪ್ರತಿನಿಧಿ ಸದಸ್ಯೆ ಶಿವಾನಿ ಶಾಂತಾರಾಮ ಕಿಶೋರ ನಾಯ್ಕ ದ್ವಾರವನ್ನು  ಹಾಗೂ ಸಹಾಯಕ ಆಯುಕ್ತೆ ಮಮತಾ ದೇವಿ ಜಿ.ಎಸ್. ಶ್ರೀ ಮಂಜುನಾಥ ದೇವಾಡಿಗ ದ್ವಾರವನ್ನು ಉದ್ಘಾಟಿಸಲಿದ್ದಾರೆ. ಮುಡೇಶ್ವರ ಗ್ರಾಮೀಣ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಎಸ್.ಎಸ್.ಕಾಮತ್ ಚಿತ್ರಕಲಾ ಪ್ರದರ್ಶನವನ್ನು, ಹಿರಿಯ ಸಾಹಿತಿ ಡಾ.ಆರ್.ವಿ. ಸರಾಫ್ ಪುಸ್ತಕ ಮಳಿಗೆಯನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ವೇದಿಕೆಯಲ್ಲಿ ಧ್ವಜ ಹಸ್ತಾಂತರಿಸಲಿರುವ ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಶ್ರೀಧರ ಶೇಟ್ ಶಿರಾಲಿ, ಮುಖ್ಯ ಅತಿಥಿಗಳಾಗಿ ಮುರ್ಡೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಸತೀಶ ಆರ್.ಶೆಟ್ಟಿ, ತಹಶೀಲ್ದಾರ ಅಶೋಕ ಭಟ್, ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ ಚಿಕ್ಕನಮನೆ, ಕ್ಷೇತ್ರ ಶಿಕ್ಷಣಾಧಿಕಾರಿ ದೇವಿದಾಸ ಮೊಗೇರ, ಕಸಾಪ ಜಿಲ್ಲಾ ಕಾರ್ಯದರ್ಶಿಗಳಾದ ಪಿ.ಆರ್.ನಾಯ್ಕ, ಜಾರ್ಜ್ ಫರ್ನಾಂಡೀಸ್, ಜೊಲ್ಲಾ ಕೋಶಾಧ್ಯಕ್ಷ ಮುರ್ತುಜಾ ಹುಸೇನ್, ಗೌರವ ಆಮಂತ್ರಿತರಾಗಿ ಯಕ್ಷರಕ್ಷೆಯ ಐ.ಆರ್.ಭಟ್, ಲಯನ್ಸ ಕ್ಲಬ್‌ನ ಅಧ್ಯಕ್ಷ  ಎಂ.ವಿ.ಹೆಗಡೆ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮೋಹನ ನಾಯ್ಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಉಲ್ಲಾಸ ನಾಯ್ಕ, ಉಪಸ್ಥಿತರಿರಲಿದ್ದಾರೆ ಎಂದು ವಿವರಿಸಿದರು.
  ಈ ಸಂದರ್ಭದಲ್ಲಿ ಸಮ್ಮೇಳನಾಧ್ಯಕ್ಷ ಮಾನಾಸುತ ಅವರ ಪುಟ್ಟದೀಪ ಕವನ ಸಂಕಲನ, ಗಂಗಾಧರ ನಾಯ್ಕ ಅವರ ಭಾನುಭಾವ ಹನಿಗವಿತೆಗಳ ಸಂಕಲನ, ಶ್ರೀಧರ ಶೇಟ್ ಶಿರಾಲಿಯವರ ಕಾವ್ಯಜ್ಯೋತಿ ಬದುಕು ಬೆಲಗುವ ಬರಹಲ ಕೃತಿ, ಶಂಕರ ಕೆ.ನಾಯ್ಕ ಅವರ ನೆನಪುಗಳು ಕೃತಿಗಳು ಬಿಡುಗಡೆಗೊಳ್ಳಲಿವೆ. ಮಧ್ಯಾಹ್ನ 2 ರಿಂದ 3ಗಂಟೆಯವರೆಗೆ ವಿಚಾರಗೋಷ್ಠಿ ನಡೆಯಲಿದ್ದು, ಆರ್.ಎನ್.ಎಸ್.ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ದಿನೇಶ ಗಾಂವಕರ್ ಅಧ್ಯಕ್ಷತೆ ವಹಿಸಲಿದ್ದಾರೆ. ಭಟ್ಕಳದ ಐತಿಹಾಸಿಕ ಹಿನ್ನೆಲೆಯ ಕುರಿತು ಡಾ.ಭಾಗೀರತಿ ನಾಯ್ಕ ಹಾಗೂ ಭಟ್ಕಳ ತಾಲೂಕಿನ ಪ್ರವಾಸೊದ್ಯಮದ ಅಭಿವೃದ್ದಿಯ ಸಾಧ್ಯತೆ ಮತ್ತು ಸವಾಲುಗಳ ಕುರಿತು ವಿರೇಂದ್ರ ಶಾನಭಾಗ ವಿಷಯ ಮಂಡನೆ ಮಾಡಲಿದ್ದಾರೆ. ಸುಧೀಂದ್ರ ಕಾಲೇಜಿನ ಪ್ರಾಂಶುಪಾಲ ಶ್ರಿನಾಥ ಪೈ, ಆರ್.ಎನ್.ಎಸ್.ಪದವಿ ಕಾಲೇಜಿನ ಪ್ರಾಂಶುಪಾಲ ಸಂಜಯ ಕೆ.ಎಸ್., ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ ನಾಯಕ,  ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಬ್ಬಿರ ದಫೇದಾರ ಇವರ ಗೌರವ ಉಪಸ್ಥಿತಿ ಇರಲಿದೆ ಎಂದರು.
  3 ಗಂಟೆಯಿಂದ 4.30ರ ತನಕ ಕವಿಗೋಷ್ಠಿ ನಡೆಯಲಿದ್ದು ಪ್ರೊ.ಆರ್.ಎಸ್.ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ತಾಲುಕಿನ ಸುಮಾರು 26 ಕವಿಗಳು ಕವನ ವಾಚಿಸಲಿದ್ದಾರೆ. ಸಂಜೆ 4.30ರಿಮದ 5.30ರ ತನಕ ಸಮ್ಮೇಳನಾಧ್ಯಕ್ಷರ ಸಾಹಿತ್ಯ ಸಂವಾದ ನಡೆಯಲಿದ್ದು, ಮಾನಾಸುತರ ಕಾವ್ಯದ ಕುರಿತು ಪೂರ್ಣಿಮಾ ಕರ್ಕಿಕರ್, ಪ್ರಕಾಶನದ ಕುರಿತು ಪತ್ರಕರ್ತರಾದ ರಾಧಾಕೃಷ್ಣ ಭಟ್ ಮಾತನಾಡಲಿದ್ದಾರೆ. ವೇದಿಕೆಯಲ್ಲಿ ಹಿರಿಯ ಸಾಹಿತಿ ನಾರಾಯಣ ಯಾಜಿ, ಡಾ.ಆರ್.ನರಸಿಂÀ ಮೂರ್ತಿ, ಭಾವನಾ ವಾಹನಿಯ ಭವಾನಿಶಂಕರ ನಾಯ್ಕ ಇವರ ಗೌರವ ಉಪಸ್ಥಿತಿ ಇರಲಿದ್ದು ಸಂವಾದದಲ್ಲಿ ಪ್ರಾಂಶುಪಾಲರು, ಉಪನ್ಯಾಸಕರು, ಶಿಕ್ಷಕರು ಪಾಲ್ಗೊಳ್ಳಲಿದ್ದಾರೆ. ಸಾಯಂಕಾಲ 5.30ಕ್ಕೆ ಸಮಾರೋಪ ಸಮಾರಂಭ ಮತ್ತು ಸನ್ಮಾನ ಸಮಾರಂಭ ನಡೆಯಲಿದ್ದು, ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್.ವಾಸರೆ ಅಧ್ಯಕ್ಷತೆ ವಹಿಸಲಿದ್ದಾರೆ. ಕಸಾಪ ಮಾಜಿ ಜಿಲ್ಲಾಧ್ಯಕ್ಷ ರೋಹಿದಾಸ ನಾಯಕ ಸಮಾರೋಪ ನುಡಿಗಳನ್ನಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಮಂಕಾಳು ವೈದ್ಯ, ಜೆ.ಡಿ.ನಾಯ್ಕ, ಕಾಸ್ಕಾರ್ಡ ಬ್ಯಾಂಕ್‌ಮಾಜಿ  ಮಾಜಿ ಉಪಾಧ್ಯಕ್ಷರು ಈಶ್ವರ ಎನ್,ನಾಯ್ಕ, ತಂಜೀಮ ಸಂಸ್ಥೆಯ ಅಧ್ಯಕ್ಷ ಇನಾಯತುಲ್ಲ ಶಾಬಂದ್ರಿ, ಆರ್.ಎನ್.ಎಸ್.ಸಮುಹ ಸಂಸ್ಥೆಗಳ ನಿರ್ದೇಶಕ ನಾಗರಾಜ ಶೆಟ್ಟಿ, ಕರ್ನಾಟಕ ಜರ್ನಲಿಸ್ಟ ಯುನಿಯನ್ ಜಿಲ್ಲಾಧ್ಯಕ್ಷ ಮನಮೋಹನ ನಾಯ್ಕ,ಪತ್ರಕರ್ತರ ಸಮಗದ ಅಧ್ಯಕ್ಷ ವಿಷ್ಣು ದೇವಾಡಿಗ, ಸ್ಪಂದನ ಚಾರಿಟೇಬಲ್ ಟ್ರಸ್ಟನ ಅಧ್ಯಕ್ಷ ರಾಘವೇಂದ್ರ ನಾಯ್ಕ ಉಪಸ್ಥಿತರಿರಲಿದ್ದಾರೆ ಎಂದರು.
  ಈ ಸಂದರ್ಭದಲ್ಲಿ ಯಕ್ಷಗಾನ, ಸಮಾಜಸೇವೆ, ಶಿಕ್ಷಣ, ಕ್ರೀಡೆ, ವೈದ್ಯಕೀಯ ಮುಂತಾದ ಕ್ಷೇತ್ರದ ಸುಮಾರು 14 ಜನ ಸಾಧಕರನ್ನು ಸನ್ಮಾನಿಸಲಾಗುತ್ತಿದೆ. ಸಾಯಂಕಾಲ 7ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಟ್ಕಳ ತಾಲೂಕಿನ ಶಿಕ್ಷಕರ ಬಳಗದಿಂದ ಕಲೆಗೆ ಸಾವಿಲ್ಲ ಕಲಾವಿದನಿಗೆ ಸುಖವಿಲ್ಲ ಎಂಬ ನಾಟಕ ಪ್ರದರ್ಶನ ನಡೆಯಲಿದೆ ಎಂದರು.
  ಪತ್ರಿಕಾ ಗೋಷ್ಠಿಯಲ್ಲಿ ಕಸಾಪ ಗೌರವ ಕಾರ್ಯದರ್ಶಿ ನಾರಾಯಣ ನಾಯ್ಕ, ಗೌರವ ಕೋಶಾಧ್ಯಕ್ಷ ಶ್ರೀಧರ ಶೇಟ್, ಕಾರ್ಯಕಾರಿ ಸಮಿತಿ ಸದಸ್ಯ ಸಂತೋಷ ಆಚಾರ್ಯ, ಸಂಘಟನಾ ಕಾರ್ಯದರ್ಶಿ ಪ್ರಕಾಶ ಶಿರಾಲಿ ಉಪಸ್ಥಿತರಿದ್ದರು.

  300x250 AD
  Share This
  300x250 AD
  300x250 AD
  300x250 AD
  Leaderboard Ad
  Back to top