Slide
Slide
Slide
previous arrow
next arrow

ಪರಿಶಿಷ್ಟ ಜಾತಿ, ಪಂಗಡದ ಕುಂದು ಕೊರತೆ ಸಭೆ:ಸಮಸ್ಯೆ ಆಲಿಸಿದ ಡಿವೈಎಸ್ಪಿ

300x250 AD

ದಾಂಡೇಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಕುಂದು- ಕೊರತೆ ಸಭೆಯು ನಗರದ ಡಿಲಕ್ಸ್ ಸಭಾಭವನದಲ್ಲಿ ಡಿವೈಎಸ್ಪಿ ಶಿವಾನಂದ ಕಟಗಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಮಸ್ಯೆಗಳನ್ನು ಆಲಿಸಿ, ಅದಕ್ಕೆ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಈ ಸಭೆಯನ್ನು ಆಯೋಜಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನತೆಯ ಸಮಸ್ಯೆಗಳು, ಸಮಸ್ಯೆಗಳ ಪರಿಹರಿಸುವಿಕೆ, ಕಾನೂನಿನ ತಿಳುವಳಿಕೆಯನ್ನು ಮೂಡಿಸುವುದು ಈ ಸಭೆಯ ಉದ್ದೇಶವಾಗಿದೆ. ಎಸ್.ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯ ಬಗ್ಗೆ ಸಮಗ್ರವಾದ ಅರಿವನ್ನು ಮೂಡಿಸಿ, ಆ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರನ್ನು ಜಾಗೃತಗೊಳಿಸುವ ಉದ್ದೇಶವನ್ನಿಟ್ಟುಕೊಂಡು ಸಭೆಯನ್ನು ನಡೆಸಲಾಗುತ್ತಿದೆ. ಈ ಸಭೆಯ ಮೂಲಕ ತಮ್ಮ ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಹೇಳಿಕೊಳ್ಳುವ ಮೂಲಕ ಸಮಸ್ಯೆ ಬಗೆಹರಿಸುವಿಕೆಗೆ ಎಲ್ಲರು ಸಹಕರಿಸಬೇಕೆಂದು ಕಟಗಿ ಕರೆ ನೀಡಿದರು.
ಸಿಪಿಐ ಬಿ.ಎಸ್.ಲೋಕಾಪುರ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾಯ್ದೆಗಳ ಸಮರ್ಪಕ ಜಾರಿಯ ನಿಟ್ಟಿನಲ್ಲಿ ಇಲಾಖೆ ಅಗತ್ಯ ಕ್ರಮವನ್ನು ಕೈಗೊಳ್ಳುತ್ತಿದ್ದು, ಎಂತಹ ಸಮಸ್ಯೆಗಳು ಬಂದಾಗಲೂ ಇಲಾಖೆ ನ್ಯಾಯಯುತವಾಗಿ ಕೆಲಸ ನಿರ್ವಹಿಸುತ್ತಿದ್ದು, ನ್ಯಾಯಯುತವಾದ ಕಾರ್ಯಕ್ಕೆ ಸರ್ವರು ಸಹಕರಿಸಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ದಲಿತ ಪರ ಸಂಘಟನೆಗಳ ಮುಖಂಡರುಗಳಾದ ಸತೀಶ ನಾಯ್ಕ, ಚಂದ್ರಕಾಂತ ನಡಿಗೇರ, ದೇವೇಂದ್ರ ಮಾದರ, ಭೀಮಶಿ ಬಾದುಲಿ, ರವಿ ಕುಮಾರ್ ಚಾಟ್ಲ, ಕರ್ಣಮ್ಮ, ಮೇರಿ ಸೋಜ್, ಸಹದೇವ ಕಾಂಬಳೆ, ನಗರ ಸಭಾ ಸದಸ್ಯೆ ರುಕ್ಮಿಣಿ ಬಾಗಾಡೆ, ಸಂದೇಶ್.ಎಸ್.ಜೈನ್ ಮೊದಲಾದವರು ತಮ್ಮ ತಮ್ಮ ಅಭಿಪ್ರಾಯ, ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಪಿಎಸೈಗಳಾದ ಐ.ಆರ್.ಗಡ್ಡೇಕರ್ ಅವರು ಸ್ವಾಗತಿಸಿದ ಕಾರ್ಯಕ್ರಮಕ್ಕೆ ಕೃಷ್ಣೆ ಗೌಡ ವಂದಿಸಿದರು. ಎಎಸೈ ಮಹಾವೀರ ಕಾಂಬಳೆ ಕರ‍್ಯಕ್ರಮ ನಿರೂಪಿಸಿದರು. ಕಾರ‍್ಯಕ್ರಮದಲ್ಲಿ ದಾಂಡೇಲಿ ವೃತ್ತ ನಿರೀಕ್ಷಕರ ಕಚೇರಿ ವ್ಯಾಪ್ತಿಯ ವಿವಿಧ ದಲಿತ ಸಂಘಟನೆಗಳ ಮುಖಂಡರುಗಳು, ಕಾರ‍್ಯಕರ್ತರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಭಾಗವಹಿಸಿದ್ದರು.

300x250 AD
Share This
300x250 AD
300x250 AD
300x250 AD
Back to top