Slide
Slide
Slide
previous arrow
next arrow

‘ಪ್ರಗತಿ ರಥ’ ಯಾತ್ರೆಗೆ ಶಾಸಕ ದಿನಕರ ಶೆಟ್ಟಿ ಚಾಲನೆ

300x250 AD

ಕುಮಟಾ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಮಾಹಿತಿಯನ್ನು ಜನರಿಗೆ ತಲುಪಿಸುವ ಸದುದ್ದೇಶದಿಂದ ಹಮ್ಮಿಕೊಂಡಿರುವ ‘ಪ್ರಗತಿ ರಥ’ ಯಾತ್ರೆಗೆ ಶಾಸಕ ದಿನಕರ ಶೆಟ್ಟಿ ಚಾಲನೆ ನೀಡಿದರು.
ಪಟ್ಟಣದ ವೆಂಕಟರಮಣ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಶಾಸಕ ಶೆಟ್ಟಿ, ಪ್ರಗತಿ ರಥ ಯಾತ್ರೆಗೆ ಚಾಲನೆ ನೀಡಿದರು. ಈ ರಥವು ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಮೂಲೆಮೂಲೆಗೆ ಸಂಚರಿಸಿ, ಭಾರತೀಯ ಜನತಾ ಪಾರ್ಟಿಯ ಸರ್ಕಾರವು ಅನುಷ್ಠಾನಕ್ಕೆ ತಂದಿರುವ ಯೋಜನೆಗಳು ಹಾಗೂ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಮಾಹಿತಿಯನ್ನು ಡಿಜಿಟಲ್ ಸ್ಕ್ರೀನ್ ಮೂಲಕ ಪ್ರಚಾರ ಮಾಡಲಿದೆ. ಈ ಕಾರ್ಯಕ್ರಮ ಯುವ ಮೋರ್ಚಾ ನೇತೃತ್ವದಲ್ಲಿ ನಡೆಯಲಿದೆ ಎಂದು ಈ ಕಾರ್ಯಕ್ರಮದ ಜಿಲ್ಲಾ ಸಂಚಾಲಕ ಎಂ. ಜಿ. ಭಟ್ ತಿಳಿಸಿದರು.


ಈ ಸಂದರ್ಭದಲ್ಲಿ ತಾಲೂಕು ಮಂಡಲಾಧ್ಯಕ್ಷ ಹೇಮಂತಕುಮಾರ ಗಾಂವಕರ, ತಾಲೂಕ ಸಂಚಾಲಕ ಯುವ ಮೋರ್ಚಾ ಅಧ್ಯಕ್ಷ ಜಗದೀಶ್ ಭಟ್, ಸಂಚಾಲಕರಾದ ಸೂರಜ್, ಪ್ರಜ್ವಲ್ ನಾಯಕ್, ಹೊನ್ನಾವರ ಮಂಡಲಾಧ್ಯಕ್ಷ ರಾಜೇಶ ಭಂಡಾರಿ, ಪುರಸಭಾ ಅಧ್ಯಕ್ಷೆ ಅನುರಾಧಾ ಬಾಳೇರಿ, ಉಪಾಧ್ಯಕ್ಷೆ ಸುಮತಿ ಭಟ್ ಹಾಗೂ ಸದಸ್ಯರುಗಳು, ಚೇರಮನ್ ಕಿರಣ ಅಂಬಿಗ, ಪ್ರಮುಖರಾದ ಗಜಾನನ ಗುನಗಾ, ವಿನೋದ ಪ್ರಭು, ಎಮ್. ಎಸ್. ಹೆಗಡೆ ಕಣ್ಣಿ, ಜಿಲ್ಲಾ ಕಾರ್ಯದರ್ಶಿ ಪ್ರಶಾಂತ ನಾಯ್ಕ, ನಗರ ಮಹಾ ಶಕ್ತಿಕೇಂದ್ರದ ಅಧ್ಯಕ್ಷ ಪ್ರಸಾದ ನಾಯಕ, ಜಿಲ್ಲಾ ಹಾಗೂ ಮಂಡಲದ ವಿವಿಧ ಮೋರ್ಚಾ ಹಾಗೂ ಪ್ರಕೋಷ್ಠಗಳ ಪದಾಧಿಕಾರಿಗಳು ಹಾಗೂ ಸದಸ್ಯರು, ಕಾರ್ಯಕರ್ತರು ಇದ್ದರು.

300x250 AD
Share This
300x250 AD
300x250 AD
300x250 AD
Back to top