Slide
Slide
Slide
previous arrow
next arrow

ಕಾಂಗ್ರೆಸ್ ಕಾರ್ಯಕರ್ತರಿಂದ ಸಿಎಂ ಕಾರು ಅಡ್ಡಗಟ್ಟಿ ಪ್ರತಿಭಟನೆ

300x250 AD

ಶಿರಸಿ: ಕದಂಬರ ರಾಜಧಾನಿ ಬನವಾಸಿಯಲ್ಲಿ ನಡೆಯುತ್ತಿರುವ ಕದಂಬೋತ್ಸವಕ್ಕೆ‌ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸಿದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಘಟನೆ ಫೆ.28 ಮಂಗಳವಾರದಂದು ನಡೆದಿದೆ.

ಬನವಾಸಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿಯ ಕಾರನ್ನು ಕಾಂಗ್ರೆಸ್ ಕಾರ್ಯಕರ್ತರು ಅಡ್ಡಗಟ್ಟಿ ವಿರೋಧ ವ್ಯಕ್ತಪಡಿಸಿದ್ದಾರೆ.

ಕದಂಬೋತ್ಸವ ಯಾವುದೇ ಒಂದು ಪಕ್ಷದ ಕಾರ್ಯಕ್ರಮವಲ್ಲ.ಇದೊಂದು ಸಂಸ್ಕೃತಿ, ನಮ್ಮ ಪರಂಪರೆಗೆ ಸಾಕ್ಷಿಯಾಗುವಂತಹ ಕಾರ್ಯಕ್ರಮವಾಗಿದೆ.ಆದರೆ ಈ ಬಾರಿ ಅದನ್ನು ಒಂದು ಪಕ್ಷದ ಉತ್ಸವವಾಗಿ ಮಾಡಲಾಗುತ್ತಿದೆ ಎನ್ನುವ ಕಾರಣಕ್ಕೆ ಪ್ರತಿಭಟನೆಯನ್ನು ನಡೆಯಲಾಗಿದೆ.

300x250 AD

ಈ ವೇಳೆ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿದ್ದು, ಪ್ರತಿಭಟನೆ ನಿರತ ಮಾಜಿ ಶಾಸಕ ವಿ.ಎಸ್. ಪಾಟೀಲ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Share This
300x250 AD
300x250 AD
300x250 AD
Back to top