ದಾಂಡೇಲಿ: ನಗರದ ಬಂಗೂರನಗರದ ರಂಗನಾಥ ಸಭಾಭವನದ ಹತ್ತಿರದಲ್ಲಿರುವ ಉದ್ಯಾನವನದಲ್ಲಿ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಸಿಎಸ್‌ಆರ್ ಯೋಜನೆಯಡಿ ಸುಮಾರು 5 ಲಕ್ಷ ರೂ. ವೆಚ್ಚದಲ್ಲಿ ಜಿಮ್ ಸಲಕರಣೆಗಳನ್ನು ಅಳವಡಿಸಲಾಗುತ್ತಿದೆ.
ಕಾಗದ ಕಾರ್ಖಾನೆಯ ಕಾರ್ಮಿಕರಿಗೆ, ಕಾರ್ಮಿಕರ ಮಕ್ಕಳಿಗೆ ಹಾಗೂ ಸಾರ್ವಜನಿಕ ಅನುಕೂಲಕ್ಕಾಗಿ ಜಿಮ್ ಸಲಕರಣೆಗಳನ್ನು ಅಳವಡಿಸಲಾಗಿದ್ದು, ಇದನ್ನು ಸದ್ಬಳಕೆ ಮಾಡುವಂತೆ ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ರಾಜೇಶ್ ತಿವಾರಿ ಮನವಿ ಮಾಡಿಕೊಂಡಿದ್ದಾರೆ.
ಉದ್ಯಾನವನದಲ್ಲಿ ಜಿಮ್ ಸಲಕರಣೆಗಳ ಅಳವಡಿಕೆ: ಸದ್ಬಳಕೆ ಮಾಡಿಕೊಳ್ಳಲು ಮನವಿ
