ಬೆಂಗಳೂರು: ಲಂಚ ಪಡೆಯುವಾಗ ಸಿಕ್ಕಿಬಿದ್ದ ದಾವಣಗೆರೆಯ ಚೆನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ ಮಾಡಾಳ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಶೋಧ ಕಾರ್ಯ ಮುಗಿದ ನಂತರ ಪ್ರಶಾಂತ ಮಾಡಾಳ ಸೇರಿದಂತೆ ಐವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಬಿಜೆಪಿ ಶಾಸಕ ಮಾಡಾಳ ವಿರೂಪಾಕ್ಷಪ್ಪ ಅವರ ಪುತ್ರನನ್ನು ಶುಕ್ರವಾರ ಬೆಳಗ್ಗೆ ಬಂಧಿಸಲಾಗಿದ್ದು, ಲೋಕಾಯುಕ್ತ ಅಧಿಕಾರಿಗಳು ಅವರ ಮನೆಯಿಂದ 6 ಕೋಟಿ ರೂ.ಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಲೋಕಾಯುಕ್ತವು ಶಾಸಕರನ್ನೂ ವಿಚಾರಣೆಗೆ ಕರೆಸುವ ಸಾಧ್ಯತೆ ಇದೆ.
ಬಿಜೆಪಿ ಶಾಸಕ ಮಾಡಾಳ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ ಮಾಡಾಳ ಗುರುವಾರ 40 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತಕ್ಕೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಇದರ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ಅವರ ನಿವಾಸ ಮತ್ತು ಕಚೇರಿಗಳಲ್ಲಿ ಶೋಧ ನಡೆಸಿದ್ದಾರೆ.
40 ಲಕ್ಷ ರೂ. ಲಂಚದ ಹೊರತಾಗಿ, ಲೋಕಾಯುಕ್ತರು ಪ್ರಶಾಂತ ಮಾಡಾಳ ಅವರ ಕಚೇರಿಯಲ್ಲಿ 1.7 ಕೋಟಿ ರೂ.ಗಳನ್ನೂ ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.