ದಾಂಡೇಲಿ: ನಾನು ರಾಷ್ಟ್ರಕ್ಕಾಗಿ ಖಾವಿಯನ್ನು ಧರಿಸಿದ್ದೇನೆ. ತಾಯಿ ಭಾರತಾಂಬೆಯ ಸೇವೆ ಮಾಡಬೇಕೆಂಬ ಉತ್ಕಟ ಬಯಕೆಯೊಂದಿಗೆ ಕಲುಷಿತವಾದ ರಾಜಕೀಯ ವ್ಯವಸ್ಥೆಯನ್ನು ಸರಿದಾರಿಗೆ ತರುವ ಮಹತ್ವದ ಸಂಕಲ್ಪ ತೊಟ್ಟು ರಾಜಕೀಯ ಕ್ಷೇತ್ರಕ್ಕೆ ಪ್ರವೇಶ ಮಾಡುತ್ತಿದ್ದೇನೆ. ಈ ನಿಟ್ಟಿನಲ್ಲಿ ಈ ಬಾರಿ ಹಳಿಯಾಳ- ದಾಂಡೇಲಿ- ಜೊಯಿಡಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಲು ಅವಕಾಶ ಸಿಗಲಿದೆ ಎಂದು ಪರಮಾತ್ಮಾಜೀ ಸ್ವಾಮಿಯವರು ಹೇಳಿದರು.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈಗಾಗಲೆ ಹಳಿಯಾಳದಲ್ಲಿ ರೈತ ಹೋರಾಟದ ಮೂಲಕ ರೈತರ ಸಮಸ್ಯೆಗಳಿಗೆ ಧ್ವನಿಯಾಗುವ ನಿಟ್ಟಿನಲ್ಲಿ ಅತ್ಯಂತ ಬದ್ಧತೆಯಿಂದ ತಾಲೂಕಿನ ಜನತೆಯ ಮತ್ತು ರೈತ ಬಾಂಧವರ ಸಹಕಾರದಲ್ಲಿ ಹೋರಾಟ ಮಾಡಿದ್ದೇನೆ ಎಂಬ ನಂಬಿಕೆ ನನಗಿದೆ. ಈ ಹೋರಾಟ ಮತ್ತು ನನ್ನ ಸಾಮಾಜಿಕವಾದ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ, ಕ್ಷೇತ್ರ ಜನ ರಾಜಕೀಯ ಪ್ರವೇಶಕ್ಕೆ ಬರುವಂತೆ ಒತ್ತಾಯಿಸಿ, ಬಿಜೆಪಿಯಲ್ಲಿ ಸ್ಪರ್ಧಿಸಬೇಕೆಂಬ ಆಗ್ರಹ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ನಾನು ಈ ಭಾರಿ ಹಳಿಯಾಳ- ದಾಂಡೇಲಿ- ಜೊಯಿಡಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಪ್ರಬಲ ಅಕಾಂಕ್ಷಿಯಾಗಿದ್ದೇನೆ. ಈ ನಿಟ್ಟಿನಲ್ಲಿ ಬಿಜೆಪಿಯ ಉನ್ನತ ಮಟ್ಟದ ನಾಯಕರ ಜೊತೆ ಮಾತನಾಡಿದ್ದೇನೆ. ಈ ಭಾರಿ ಈ ಕ್ಷೇತ್ರದಿಂದ ಬರಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲು ಅವಕಾಶ ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಿಜೆಪಿಯಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ಪರಮಾತ್ಮಾಜೀ
